ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ನೂತನ ಶಸ್ತ್ರಚಿಕಿತ್ಸಾ ಕೊಠಡಿ ಕಾರ್ಯಾರಂಭ - ಮೊದಲ ದಿನವೇ 7ಶಸ್ತ್ರಚಿಕಿತ್ಸೆ

ಮಂಗಳೂರು: ವೆನ್‍ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಾಣಗೊಂಡ ಹೊಸ ಶಸ್ತ್ರಚಿಕಿತ್ಸಾ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಶಸ್ತ್ರಚಿಕಿತ್ಸೆಗಳನ್ನು ಪ್ರಾರಂಭಿಸಲಾಗಿದ್ದು, ಮೊದಲ ದಿನವೇ 7 ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ತಜ್ಞ ವೈದ್ಯ ಡಾ.ಸದಾನಂದ ಪೂಜಾರಿ ಹಾಗೂ ಆಸ್ಪತ್ರೆ ಸಿಬ್ಬಂದಿ ತಂಡ ಕಾರ್ಯರಂಭಕ್ಕೆ ಸಹಕರಿಸಿದ್ದಾರೆ. ಮೊದಲ ದಿ‌ನ ಡಾ.ಸುರೇಶ ಪೈ ತಂಡದವರಿಂದ ಥೋರಾಸಿಕ್ ಸರ್ಜರಿ ಮಾಡಲಾಯಿತು. ಡಾ ಹೇಮಲತಾ ಹಾಗೂ ಡಾ ವಿಶ್ವವಿಜೇತ ತಂಡವು ಐದು ಮಂದಿಯ ಮೂಗಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಡಾ.ಅರ್ಜುನ್ ಶೆಟ್ಟಿ ತಂಡವು ಮೆದುಳಲ್ಲಿ ರಕ್ತ ಹೆಪ್ಪುಗಟ್ಟಿದ ರೋಗಿಗೆ ತುರ್ತು ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಡಾ.ಸುರೇಶ ಭಟ್ ಅರವಳಿಕೆ ತಂಡದ ಮುಖ್ಯಸ್ಥರಾಗಿದ್ದು ಎಲ್ಲಾ ಶಸ್ತ್ರ ಚಿಕಿತ್ಸೆ ಯಾವುದೇ ತೊಂದರೆಯಾಗದಂತೆ ನೆರವೇರಿಸಿದ್ದಾರೆ.

ಶಸ್ತ್ರಚಿಕಿತ್ಸೆ ಸಂದರ್ಭದ ನರ್ಸಿಂಗ್ ಅಧಿಕಾರಿಗಳಾದ ಶೈಲಾ, ಜೇಸಿಂತ, ಅಶ್ವಿನಿ, ರೇಷ್ಮಾ, ಅಲ್ವನ ಮೆನೇಜ್ಸ್ ಉಪಸ್ಥಿತದ್ದರು. ಓಟಿ ಟೆಕ್ನಿಷಿಯನ್‍ಗಳಾದ ಧನುಶ್ರೀ, ಶ್ರದ್ದಾ, ಹೇಮಾಶ್ರೀ, ಅರ್ಪಿತಾ, ಪ್ರದೀಪ್ ಹಾಗೂ ಡಿ ಗ್ರೂಪ್ ನೌಕರರಾದ ಜಯಪ್ರಕಾಶ್ ಮತ್ತು ಹರೀಶ್ ಉಪಸ್ಥಿತರಿದ್ದರು.

ಡಿಸೆಂಬರ್ 1ರಿಂದ ಶಸ್ತ್ರಚಿಕಿತ್ಸಾ ಹಾಗೂ ಮೂಳೆ ವಿಭಾಗದ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭವಾಗಲಿದ್ದು, ಇದಕ್ಕೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ಶಸ್ತ್ರಚಿಕಿತ್ಸಾ ಕೊಠಡಿಗಳು ಹಾಗೂ ವಾರ್ಡ್‌ಗಳು ಬಡವರಿಗೆ ವರದಾನ ಆಗಲಿದೆ ಎಂದು ವೆನ್‍ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ಡಿ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

08/11/2024 09:53 pm

Cinque Terre

3.11 K

Cinque Terre

0

ಸಂಬಂಧಿತ ಸುದ್ದಿ