ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಸತ್ ಸ್ಪರ್ಧೆಯಲ್ಲಿ ಸಚಿವರು, ಶಾಸಕರಾದ ವಿದ್ಯಾರ್ಥಿಗಳು

ಚಿಕ್ಕಮಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ನಡೆಸುವ ಮಕ್ಕಳಿಗೆ ರಾಜಕೀಯ ವಿಷಯಗಳ ಕುರಿತು ಮಾಹಿತಿ ಹಾಗೂ ಸಂಸದೀಯ ಕಾರ್ಯ ವೈಖರಿಯ ಕುರಿತು ಪ್ರಜ್ಞೆ ಮೂಡಿಸಲು ಮತ್ತು ಅವರನ್ನು ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಸಕ್ರಿಯರಾಗಲು ಪ್ರೇರೆಪಿಸುವ ಉದ್ದೇಶದಿಂದ ಯುವ ಸಂಸತ್ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಉತ್ತಮ ವಾಕ್‌ಚಾತುರ್ಯ, ಸ್ಪಷ್ಟ ವಿಷಯ ಮಂಡನೆ, ವಿದ್ಯಾರ್ಥಿ ವರ್ತನೆ ಹಾಗೂ ಇನ್ನಿತರ ವಿಷಯಗಳನ್ನು ಮಾನದಂಡವಾಗಿಸಿಕೊಂಡು ತಾಲ್ಲೂಕು ಮಟ್ಟದಲ್ಲಿ ಭಾಗವಹಿಸಿ ವಿಜೇತರಾದ ಜಿಲ್ಲೆಯ ಒಟ್ಟು 70 ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ. ಇದೆ ಮಾನದಂಡಗಳ ಮೂಲಕ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ.

ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಿಗೆ ಶಾಲಾ ಹಂತದಿಂದಲೂ ತರಬೇತಿ ನೀಡಿ ಸಿದ್ಧಪಡಿಸಲಾಗಿದೆ. ಇಂತಹ ಚಟುವಟಿಕೆಗಳಿಂದ ಮಕ್ಕಳು ರಾಜಕೀಯ ವಿಷಯಗಳಲ್ಲಿ ಸಕ್ರಿಯರಾಗಿ ಹೆಚ್ಚು ಮಾಹಿತಿ ಪಡೆಯಲು ಸಾಧ್ಯವಾಗುತ್ತದೆ ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

Edited By : PublicNext Desk
Kshetra Samachara

Kshetra Samachara

09/11/2024 11:29 am

Cinque Terre

960

Cinque Terre

0

ಸಂಬಂಧಿತ ಸುದ್ದಿ