ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂಡೂರು: ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುವ ಬಿಜೆಪಿಗೆ ಜನರ ಸಮಸ್ಯೆಯ ಅರಿವಿಲ್ಲ - ಸಿಎಂ ಕಿಡಿ

ಸಂಡೂರು: ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ನಮ್ಮ ನಿಮ್ಮ ಬದುಕಿನ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತಾಡಿಲ್ಲ. ಜಾತಿ-ಧರ್ಮದ ಹೆಸರಿನಲ್ಲಿ ಭಾರತೀಯರನ್ನು ಪರಸ್ಪರ ಕಚ್ಚಾಡಿಸಿ, ವಿಭಜನೆ ಮೂಲಕ ರಾಜಕಾರಣ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಡ್ಡು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಭಾರತ್ ಜೋಡೋ ಮೂಲಕ ಭಾರತೀಯರ ಮನಸ್ಸು-ಹೃದಯಗಳನ್ನು ಬೆಸೆಯುವ "ಭಾರತ್ ಜೋಡೋ" ಚಳವಳಿಯನ್ನು ಮುನ್ನಡೆಸಿದ್ದಾರೆ. ರೈತರ ಬದುಕನ್ನು ಮಾರಣ ಹೋಮ ಮಾಡುವ ಕರಾಳ ಕಾಯ್ದೆಗಳನ್ನು ಮೋದಿ ಸರ್ಕಾರ ಜಾರಿಗೆ ತಂದಿತು. ದೇಶಾದ್ಯಂತ ರೈತರು ನಡೆಸಿದ ವಿರೋಚಿತ ಹೋರಾಟಕ್ಕೆ ಶರಣಾಗಿ ಮೋದಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿತು ಎಂದರು.

ರೈತರ ಬದುಕಿಗೆ ಕರಾಳತೆ ಸೃಷ್ಟಿಸಿದ ಮೋದಿ ಸರ್ಕಾರ ಮತ್ತೊಂದು ಕಡೆ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಾ ಇಡೀ ದೇಶದ ಶ್ರಮಿಕ ಮತ್ತು ದುಡಿಯುವ ವರ್ಗಗಳ ಬದುಕಿನ ಅವಕಾಶಗಳನ್ನು ಹೊಸಕಿ ಹಾಕುವ ಹುನ್ನಾರವನ್ನೂ ನಡೆಸುತ್ತಿದೆ. ಬಿಜೆಪಿ ಸಂಸದ ಅನಂತ ಕುಮಾರ ಹೆಗ್ಡೆ ಯವರು ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲಿಕ್ಕೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು. ಈ ಹೇಳಿಕೆಯನ್ನು ಪ್ರಧಾನಿ ಮೋದಿ ಅಲ್ಲಗಳೆಯಲಿಲ್ಲ ಎಂದು ಅವರು ಕಿಡಿಕಾರಿದರು.

1947 ರಿಂದ 2014 ರವರೆಗೂ ಭಾರತ ದೇಶದ ಸಾಲ ಇದ್ದದ್ದು ಕೇವಲ 54 ಲಕ್ಷ ಕೋಟಿ ರೂ. ಮೋದಿ ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ 185 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕೇವಲ ಮೋದಿ ಒಬ್ಬರು ತಮ್ಮ ಅವಧಿಯಲ್ಲಿ 135 ಲಕ್ಷ ಕೋಟಿ ಸಾಲ ಮಾಡಿಟ್ಟಿದ್ದಾರೆ. ಇದೆಲ್ಲವನ್ನೂ ತೀರಿಸುವ ಜವಾಬ್ದಾರಿ ಭಾರತೀಯರ ತಲೆಗೆ ಬಂದಿದೆ. ಇದೇ ಮೋದಿಯವರ ಕೀರ್ತಿ ಎಂದರು.

Edited By : Somashekar
PublicNext

PublicNext

09/11/2024 05:08 pm

Cinque Terre

24 K

Cinque Terre

4

ಸಂಬಂಧಿತ ಸುದ್ದಿ