ಬೆಂಗಳೂರು : ಶಾಲೆಗೆ 25 ಎಕರೆ ದಾನ ನೀಡೀದ್ದೇನೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಷ್ಟು. ಜಮೀನು ಕೊಡಲಿಕ್ಕೆ ಅವರೇನು ಮಹಾರಾಜರ ವಂಶಸ್ಥರಾ? ಎಂದು ಪ್ರಶ್ನಿಸಿದರು,ಚನ್ನಪಟ್ಟಣ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ನಡುವೆ ಮುಕುಂದ ಗ್ರಾಮದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿ ಕುಮಾರಸ್ವಾಮಿ, ಅವರು ಎಲ್ಲಿ ಜಮೀನು ಕೊಟ್ಟಿದ್ದಾರೆ? 25 ಎಕರೆ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ದಾಖಲೆ ಸಮೇತ ಜನರಿಗೆ ತಿಳಿಸಲಿ, ನಾನೂ ಸಂತೋಷ ಪಡುತ್ತೇನೆ. ಸುಳ್ಳು ಹೇಳಲು ಇತಿ ಮಿತಿ ಇರಬೇಕು. ನಾನು ಇವರ ರೀತಿ ಅದು ಮಾಡಿದ್ದೇನೆ, ಇದು ಮಾಡಿದ್ದೇನೆ ಎಂದು ಬೋರ್ಡ್ ಹಾಕಿಕೊಂಡಿಲ್ಲ. ಆದರೆ, ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಎಷ್ಟೆಲ್ಲ ಅಭಿವೃದ್ದಿ ಮಾಡಿದ್ದೇನೆ ಎಂಬುದು ಜನತೆಗೆ ಗೊತ್ತಿದೆ ಎಂದರು.
ನಾನು ಸಿಎಂ ಆಗುವ ಮೊದಲು ರಾಜ್ಯದಲ್ಲಿ ಎಷ್ಟು ಕಾಲೇಜು, ಹೈಸ್ಕೂಲ್ ಗಳು ಇದ್ದವು? ನನ್ನ 20 ತಿಂಗಳ ಆಡಳಿತದಲ್ಲಿ ಎಷ್ಟಾದವು ಎಂಬುದಕ್ಕೆ ದಾಖಲೆಗಳೇ ಮಾಹಿತಿ ಕೊಡುತ್ತವೆ. ಯಾರಾದರೂ ತೆಗೆದು ನೋಡಬಹುದು. ಶಿಕ್ಷಣ ಕ್ಷೇತ್ರಕ್ಕೆ ಈ ವ್ಯಕ್ತಿಯ ಕೊಡುಗೆ ಏನು? ಸಾತನೂರು, ಕನಕಪುರ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ ಏನು ಮಾಡಿದ್ದಾರೆ. ಪಟ್ಟಿ ಮಾಡಲಿ. ಇಷ್ಟು ವರ್ಷ ಆಡಳಿತ ಮಾಡಿರುವವರಿಗೆ ಅವರ ತವರೂರು ದೊಡ್ಡಾಲಹಳ್ಳಿಯಲ್ಲಿ ಮತಗಳ ಲೀಡ್ ಬರುತ್ತಿಲ್ಲ ಯಾಕೆ? ಇವರು 25 ಎಕರೆ ಕೊಟ್ಟಿದ್ದಾರೋ ಅಥವಾ 25 ಗುಂಟೆ ಕೊಟ್ಟಿದ್ದಾರೋ ಗೊತ್ತಿಲ್ಲ ಎಂದು ತಿರುಗೇಟು ನೀಡಿದರು.
PublicNext
09/11/2024 05:49 pm