ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸರ್ಕಾರಿ ಟೆಂಡರ್‌ಗಳಲ್ಲಿ `SC-ST' ಜೊತೆಗೆ `OBC'ಗೂ ಮೀಸಲು : ರಾಜ್ಯ ಸರ್ಕಾರದಿಂದ ಗೆಜೆಟ್ ಆದೇಶ!

ಬೆಂಗಳೂರು : ರಾಜ್ಯದ ವಿವಿಧ ಇಲಾಖೆಗಳಲ್ಲಿ 1 ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಎಸ್‌ಸಿ, ಎಸ್‌ಟಿ ಜೊತೆಗೆ ಒಬಿಸಿಯ ಪ್ರವರ್ಗ-1 ಹಾಗೂ ಪ್ರವರ್ಗ-2 ಗೂ ಮೀಸಲಾತಿ ಅನ್ವಯವಾಗುವಂತೆ ಮಾಡಲು ಕರ್ನಾಟಕ ಸಾರ್ವಜನಿಕ ಸಂಗ್ರಹಣ ಪೋರ್ಟಲ್ (ಕೆಪಿಪಿಪಿ) ಮಾರ್ಪಾಡುಗಳನ್ನು ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖ (1) ರಲ್ಲಿನ ಸರ್ಕಾರದ ಆದೇಶದಲ್ಲಿ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಮಾದರಿ ಟೆಂಡರ್ ದಾಖಲೆಗಳಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲಾಗಿರುತ್ತದೆ.

ಉಲ್ಲೇಖ (2) ರಲ್ಲಿನ ಸರ್ಕಾರದ ಆದೇಶದಲ್ಲಿ, ಉಲ್ಲೇಖ (1) ರಲ್ಲಿನ ಆದೇಶದಲ್ಲಿ ಮಾದರಿ ಟೆಂಡ‌ರ್ ದಾಖಲೆಗಳ ಷರತ್ತುಗಳಿಗೆ ತರಲಾದ ಎಲ್ಲಾ ಮಾರ್ಪಾಡುಗಳನ್ನು ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರುಗಳಿಗೂ ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳ ಟೆಂಡರ್‌ಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅನ್ವಯಿಸಿ ಅವಕಾಶ ಕಲ್ಪಿಸಲಾಗಿರುತ್ತದೆ.

ಮುಂದುವರೆದು, ಒಂದು ಕೋಟಿ ರೂಪಾಯಿಗಳವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗುತ್ತಿಗೆದಾರರು ಹಾಗೂ ಹಿಂದುಳಿದ ವರ್ಗಗಳ ಪ್ರವರ್ಗ-1 ಮತ್ತು ಪ್ರವರ್ಗ II(A) ರಲ್ಲಿನ ಜಾತಿಗಳ ಟೆಂಡರ್‌ದಾರರು ಟೆಂಡರ್‌ಗಳಲ್ಲಿ ಭಾಗವಹಿಸುವ ಕುರಿತು ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ ಶೇಕಡಾವಾರು ಮೀಸಲಾತಿಯನ್ವಯ Randomization ಮೂಲಕ ಕಾಮಗಾರಿಗಳನ್ನು ಆಯ್ಕೆ ಮಾಡಿಕೊಳ್ಳುವ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ- ಆಡಳಿತ) ರವರಿಂದ ಸ್ಪಷ್ಟಿಕರಣ ಕೋರಲಾಗಿರುತ್ತದೆ.

ಈ ಬಗ್ಗೆ ದಿನಾಂಕ:01.10.2024 ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕಾಮಗಾರಿಗಳ ಅನುಷ್ಟಾನ ನಿರ್ವಹಿಸುವ ಲೋಕೋಪಯೋಗಿ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ), ಮುಂತಾದ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಪ್ರವರ್ಗ-1 ಮತ್ತು ಪ್ರವರ್ಗ-IIA ಗುತ್ತಿಗೆದಾರರ ಪ್ರತಿನಿಧಿಗಳು ಹಾಜರಾದ ಸಭೆಯಲ್ಲಿ ಚರ್ಚಿಸಿದೆ.

ಸಭೆಯಲ್ಲಿ ಚರ್ಚಿಸಿದ ನಂತರ, ವಿವಿಧ ಆಯ್ಕೆಗಳನ್ನು ಪರಿಶೀಲಿಸಿ ಪ್ರಸಕ್ತ ಚಾಲ್ತಿಯಲ್ಲಿರುವಂತೆ ಇಂಜಿನಿಯರಿಂಗ್ ಡಿವಿಜನ್ ಅಥವಾ ಟೆಂಡರ್ ಆಹ್ವಾನ ಪ್ರಾಧಿಕಾರವನ್ನು ಘಟಕ (Unit)ವಾಗಿ ಪರಿಗಣಿಸಿ ನಾಲ್ಕಕ್ಕಿಂತ ಹೆಚ್ಚಿನ ಸಂಖ್ಯೆಯ ಕಾಮಗಾರಿಗಳನ್ನು Randomize ಮಾಡಿದ ನಂತರ ಉಲ್ಲೇಖ (3) ರಲ್ಲಿನ ಸರ್ಕಾರದ ಆದೇಶದಲ್ಲಿ ಹೊರಡಿಸಿರುವ ರೋಸ್ಟರ್‌ ಬಿಂದುವನ್ನು ಅನ್ವಯಿಸಿ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಮೀಸಲಾತಿಯನ್ನು ನಿಗಧಿಪಡಿಸಲು ಹಾಗೂ ಒಂದು ಸಲ Randomize ಮಾಡಿದ ನಂತರ ಮೀಸಲಾತಿಯು ಯಾವ ರೋಸ್ಟರ್ ಬಿಂದುವಿನಲ್ಲಿ ಅಂತ್ಯವಾಗಿರುತ್ತದೆಯೋ, ಮುಂದಿನ Randomization ನಲ್ಲಿ ಮೀಸಲಾತಿಯನ್ನು ಅದೇ ರೋಸ್ಟರ್ ಬಿಂದುವಿನಿಂದ ಮುಂದುವರೆಸಿ ನಿಗದಿಪಡಿಸಿ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವ ಆಯ್ಕೆಯನ್ನು ಅನುಮೋದಿಸಿರುತ್ತಾರೆ. ಮೇಲಿನ ಪ್ರಕ್ರಿಯೆಯನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣಾ ಪೋರ್ಟಲ್‌ನಲ್ಲಿ (KPPP) ಅಳವಡಿಸುವ ಬಗ್ಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಕಾರ್ಯಕಾರಿ ಆದೇಶ ಹೊರಡಿಸಬೇಕಾಗಿರುತ್ತದೆ.

Edited By : Nagaraj Tulugeri
PublicNext

PublicNext

09/11/2024 07:25 pm

Cinque Terre

27.28 K

Cinque Terre

0

ಸಂಬಂಧಿತ ಸುದ್ದಿ