ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಶ್ರೀರಾಮುಲು ಮೇಲೆ ಪ್ರಾಸಿಕ್ಯೂಷನ್ ಮೈಕೆಲ್ ಡಿ ಕುನ್ಹಾ ಆಯೋಗ ಶಿಫಾರಸು ಮಾಡಿರೋದು ರಾಜಕೀಯ ಪ್ರೇರಿತ ಮತ್ತು ಸುಳ್ಳು ಆರೋಪ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಎಲ್ಲಕ್ಕೂ ಎಸ್‌ಐಟಿ ರಚಿಸುತ್ತಿದೆ. ಎದ್ದರು SIT, ಕೂತರು SIT, ಮಲಗಿದರು SIT, ಸತ್ತರೂ SIT ಮಾಡ್ತಾರೆ, ಸಿದ್ದರಾಮಯ್ಯನವರ ಹಗರಣದ ವಿರುದ್ಧ ಕೆಂಪಣ್ಣ ಆಯೋಗ ರಚಿಸಿದ್ದು, ಅದರ ವರದಿ ಬಂದೇ ಇಲ್ಲ. ಕೋವಿಡ್ ಸಮಯದಲ್ಲಿ ಬಿ.ಎಸ್.ಯಡಿಯೂರಪ್ಪನವರು ಅಧಿಕಾರಿಗಳು ಹೇಳಿದಂತೆ ಖರೀದಿ ಮಾಡಲು ಸೂಚಿಸಿದ್ದಾರೆ. ಇದರಲ್ಲಿ ಅವರದ್ದು ಏನು ತಪ್ಪಿಲ್ಲ, ಇದು ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ. ಖರೀದಿ ಮಾಡುವ ಅಧಿಕಾರ ಮುಖ್ಯಮಂತ್ರಿಗಿಲ್ಲ. ಯಾವ ಕಂಪನಿಯಿಂದ, ಎಲ್ಲಿಂದ ಖರೀದಿ ಮಾಡಬೇಕೆಂದು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಈ ಪ್ರಕರಣ ಸರ್ಕಾರಕ್ಕೆ ತಿರುಗುಬಾಣವಾಗಲಿದೆ ಎಂದರು.
PublicNext
09/11/2024 07:40 pm