ಚಿಕ್ಕಮಗಳೂರು : ಕಾಡುಕೋಣ ದಾಳಿಯಿಂದ ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ನಡೆದಿದೆ.
ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿರೋ ಬಿದರೆ ಗ್ರಾಮದ ತೋಟವೊಂದರಲ್ಲಿ ಕೆಲಸ ಮಾಡುವಾಗ ಏಕಾಏಕಿ ಕಾಡುಕೋಣ ದಾಳಿ ಮಾಡಿದೆ. ಕಾಡುಕೋಣ ದಾಳಿ ಮಧ್ಯೆಯೂ ಕಾರ್ಮಿಕರು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ದಾಳಿಯಿಂದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಭಾಗದಲ್ಲಿ ಅರಣ್ಯ ಇಲಾಖೆಯವರು ಹುಲಿ ಬಿಟ್ಟಿದ್ದಾರೆ ಅದರಿಂದಲೇ ದಾಳಿಯಾಗಿದೆ ಎಂದು ಸ್ಥಳೀಯರು ಆತಂಕಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಈ ಬಗ್ಗೆ ಅರಣ್ಯ ಇಲಾಖೆ ಪರಿಶೀಲಿಸಿದಾಗ ಕಾಡು ಕೋಣ ದಾಳಿ ಎಂಬುದು ದೃಢಪಟ್ಟಿದೆ.
Kshetra Samachara
09/11/2024 08:18 pm