ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಕ್ಷಿಕೆರೆ: ಪತ್ನಿ, ಮಗುವನ್ನು ಬರ್ಬರವಾಗಿ ಕೊಂದು ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ವ್ಯಕ್ತಿ.!

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿಯೋರ್ವ ಪತ್ನಿ ಹಾಗೂ ಮಗುವನ್ನು ಹತ್ಯೆಗೈದು ತಾನೂ ರೈಲಿನಡಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದೆ. ಪತ್ನಿ ಪ್ರಿಯಾಂಕ (28) ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು ಎಂದು ತಿಳಿದುಬಂದಿದೆ.

ಶುಕ್ರವಾರ ಬೆಳಗಿನ ಜಾವ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಕಾರ್ತಿಕ್ ತಂದೆ ಪಕ್ಷಿಕೆರೆ ಜಂಕ್ಷನ್ ಬಳಿಯಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದು, ತಂದೆ ತಾಯಿ ಹೋಟೆಲ್‌ಗೆ ಹೋದ ಬಳಿಕ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಕಿಟಿಕಿಯ ಗಾಜಿನ ತುಂಡಿನಿಂದ ಹತ್ಯೆಗೈದು ಬಳಿಕ ಕಾರ್ತಿಕ್ ಭಟ್ ಪಡುಪಣಂಬೂರು ಬೆಳ್ಳಾಯರು ಶ್ರೀ ಚಂದ್ರ ಮೌಳೀಶ್ವರ ದೇವಸ್ಥಾನದ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪಕ್ಷಿಕೆರೆಯಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿರುವ ಜನಾರ್ಧನ ಭಟ್ ಹಾಗೂ ಶಾಮಲಾ ದಂಪತಿಗೆ ಓರ್ವ ಪುತ್ರ ಹಾಗೂ ಪುತ್ರಿ ಇದ್ದು ಪುತ್ರ ಕಾರ್ತಿಕ್ ಭಟ್ ಕಳೆದ ಆರು ವರ್ಷಗಳ ಹಿಂದೆ ಪ್ರಿಯಾಂಕ ಜೊತೆ ವಿವಾಹವಾಗಿದ್ದರು. ಬಳಿಕ ಮನೆಯಲ್ಲಿ ತಂದೆ ತಾಯಿ ಜೊತೆ ಸಣ್ಣ ಪುಟ್ಟ ಮನಸ್ತಾಪವಿದ್ದು ಮಾತುಕತೆ ಕಡಿಮೆ ಮಾಡಿದ್ದ. ಕೆಲ ವರ್ಷಗಳ ಹಿಂದೆ ಸುರತ್ಕಲ್ ಸೊಸೈಟಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದು ಬಳಿಕ ಆನ್‌ಲೈನ್‌ನಲ್ಲಿ ವ್ಯವಹಾರ ನಡೆಸುತ್ತಿದ್ದ. ಕೊಲೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಅನೂಪ್ ಅಗರ್ವಾಲ್ ಮಾತನಾಡಿ, ಕೊಲೆಯಾದ ಸ್ಥಳದಲ್ಲಿ ಡೆತ್ ನೋಟ್ ದೊರಕಿದ್ದು ಸೂಕ್ತ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಪಕ್ಷಿಕೆರೆ ಎಸಿಪಿ ಶ್ರೀಕಾಂತ್, ಡಿಸಿಪಿ ಸಿದ್ದಾರ್ಥ್ ಗೋಯಲ್, ಮುಲ್ಕಿ ಪೊಲೀಸ್ ಇನ್ಸ್‌ಪೆಕ್ಟರ್ ವಿದ್ಯಾಧರ್ ಬಿ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದ್ದು ತೀವ್ರ ತನಿಖೆ ನಡೆಸುತ್ತಿದ್ದಾರೆ.

Edited By : Manjunath H D
PublicNext

PublicNext

09/11/2024 10:04 pm

Cinque Terre

70.25 K

Cinque Terre

1

ಸಂಬಂಧಿತ ಸುದ್ದಿ