ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕಾರ್ನಾಡ್ ಬೈಪಾಸ್ ಬಳಿ ಬಸ್ನಲ್ಲಿದ್ದ ಪ್ರಯಾಣಿಕರಿಗೆ ಕಾರು ಚಾಲಕ ಸಹಿತ ಇತರೆ ಪ್ರಯಾಣಿಕರು ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದು ಪೊಲೀಸರು ಸಕಾಲಿಕ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ.
ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಕೋಲ್ನಾಡು ಕಡೆಯಿಂದ ಉಡುಪಿವರೆಗೆ ಹೆದ್ದಾರಿ ಮರು ಡಾಮಾರೀಕರಣ ನಡೆಯುತ್ತಿದ್ದು ಹೆದ್ದಾರಿ ಏಕಮುಖರ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ತಡೆರಹಿತ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ಮಾಣಿ ಮೂಲದವರು ಬಸ್ ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಆಗ ಅಡ್ಡ ಬಂದ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮುಲ್ಕಿ ಪೊಲೀಸ್ ಇನ್ಸ್ಪೆಕ್ಟರ್ ವಿದ್ಯಾಧರ್ ಹಾಗೂ ಸಿಬ್ಬಂದಿ ಮತ್ತು ಟ್ರಾಫಿಕ್ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ ಕಾರಿನಲ್ಲಿದ್ದವರನ್ನು ವಶಕ್ಕೆ ಪಡೆದಿದ್ದಾರೆ.
PublicNext
09/11/2024 10:42 pm