ಧಾರವಾಡ: ಕೋತಿ ಸೇರಿದಂತೆ ಇತರ ಕಾಡು ಪ್ರಾಣಿಗಳನ್ನು ಮನೆಯಲ್ಲಿ ಇಟ್ಟುಕೊಂಡು ಸಾಕುವುದು ಅರಣ್ಯ ಇಲಾಖೆ ನಿಯಮಾವಳಿ ಪ್ರಕಾರ ಅಪರಾಧವಾಗಿದ್ದು, ಅದೇ ರೀತಿ ಕೆಂಪು ಕೋತಿ ಮರಿಯೊಂದನ್ನು ಮನೆಯಲ್ಲಿ ಸಾಕುತ್ತಿದ್ದ ವಿಷಯ ಗಮನಕ್ಕೆ ಬಂದ ತಕ್ಷಣವೇ
ವೈಲ್ಡ್ ಲೈಫ್ ವೆಲ್‌ಫೇರ್ ಸೊಸೈಟಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆ ಕೋತಿ ಮರಿಯನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ಅಮರಗೋಳದ ವ್ಯಕ್ತಿಯೊಬ್ಬ ಕೋತಿ ಮರಿಯನ್ನು ತನ್ನ ಮನೆಯಲ್ಲಿ ಕಟ್ಟಿ ಹಾಕಿಕೊಂಡು ಸಾಕುತ್ತಿದ್ದ. ಈ ವಿಷಯ ತಿಳಿದು ಸ್ಥಳಕ್ಕೆ ಹೋದ ವೈಲ್ಡ್ ಲೈಫ್ ವೆಲ್‌ಫೇರ್ ಸೊಸೈಟಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆ ಕೋತಿ ಮರಿಯನ್ನು ತಮ್ಮ ಸುಪರ್ದಿಗೆ ಪಡೆದು ಆ ಯುವಕನಿಗೆ ತಿಳುವಳಿಕೆ ಹೇಳಿದ್ದಾರೆ.
ಸದ್ಯ ಆ ಕೋತಿ ಮರಿ ಅರಣ್ಯ ಇಲಾಖೆ ಸುಪರ್ದಿಯಲ್ಲಿದ್ದು, ಕೆಲವು ದಿನಗಳ ನಂತರ ಅದನ್ನು ಕಾಡಿಗೆ ಬಿಡಲಾಗುವುದು ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
10/11/2024 08:02 am