ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ: ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ - ಬಸ್ಸಿನ ಗಾಜು ಒಡೆದು ವಿದ್ಯಾರ್ಥಿಗಳ ಆಕ್ರೋಶ

ಮೂಡುಬಿದಿರೆ: ಕಾಲೇಜು ಬಸ್ ಅನ್ನು ಓವರ್ ಟೇಕ್ ಮಾಡುವ ಭರದಲ್ಲಿ ಖಾಸಗಿ ಬಸ್ಸೊಂದು ಮುಂಭಾಗದಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮತ್ತು ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ತೋಡಾರಿನಲ್ಲಿ ನಡೆದಿದೆ. ಘಟನೆಯಿಂದ ಉದ್ರಿಕ್ತಗೊಂಡ ವಿದ್ಯಾರ್ಥಿಗಳು ಬಸ್ ಗಾಜು ಒಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾಸ್ಟರ್ ಎಂಬ ಖಾಸಗಿ ಬಸ್ ಮೂಡುಬಿದಿರೆಯಿಂದ ಮಂಗಳೂರಿನತ್ತ ಸಂಚರಿಸುತ್ತಿತ್ತು. ಬಸ್ ತೋಡಾರ್ ಮೈಟ್ ಕಾಲೇಜ್ ಮುಂಭಾಗ ಬರುತ್ತಿದ್ದಂತೆ ಕಾಲೇಜು ಬಸ್ಸೊಂದು ಸಂಚರಿಸುತ್ತಿತ್ತು. ಈ ವೇಳೆ ಖಾಸಗಿ ಬಸ್ ಓವರ್ ಟೇಕ್ ಮಾಡುವ ಭರದಲ್ಲಿ ಕಾಲೇಜ್ ಬಸ್‌ಗೆ ಡಿಕ್ಕಿ ಹೊಡೆದು ಮುಂಭಾಗದಲ್ಲಿ ತಾಯಿ ಮತ್ತು ಪುತ್ರಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ತಾಯಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಖಾಸಗಿ ಬಸ್‌ಗಳು ರಭಸದ ಕಡಿವಾಣವಿಲ್ಲದೆ ಓಡಾಡುತ್ತಿದ್ದು ಈ ಬಗ್ಗೆ ಈಗಾಗಲೇ ಹಲವು ಪ್ರಕರಣಗಳು ನಡೆದಿವೆ. ಆದರೆ ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಕಡಿವಾಣ ಹಾಕಿದಂತಿಲ್ಲ. ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಉದ್ರಿಕ್ತಗೊಂಡಿರುವ ವಿದ್ಯಾರ್ಥಿಗಳನ್ನು ಸಮಧಾನ ಪಡಿಸುತ್ತಿದ್ದಾರೆ. ವಿದ್ಯಾರ್ಥಿಗಳು ಬಸ್ಸಿನ ಓನರ್ ಸ್ಥಳಕ್ಕೆ ಆಗಮಿಸಬೇಕೆಂದು ಆಗ್ರಹಿಸಿ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

Edited By : Suman K
PublicNext

PublicNext

11/11/2024 12:37 pm

Cinque Terre

28.19 K

Cinque Terre

26

ಸಂಬಂಧಿತ ಸುದ್ದಿ