ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರಿನಲ್ಲಿ ಮುಂದುವರೆದ ಬೀಟಮ್ಮ ಗ್ಯಾಂಗ್ ಉಪಟಳ, ಹಲವುಗಳಲ್ಲಿ ನಿಷೇಧಾಜ್ಞೆ ಶಾಲಾ ಕಾಲೇಜುಗಳಿಗೆ ರಜೆ

ಚಿಕ್ಕಮಗಳೂರು: ಮಲೆನಾಡಿನ ಕೆಲವು ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ 11 ಗ್ರಾಮಗಳಲ್ಲಿ ನಿಷೇಧಾಜ್ಞೆ ಹೇರಿ ಜಿಲ್ಲಾಡಳಿತ ಭಾನುವಾರ ಆದೇಶ ಹೊರಡಿಸಿದ್ದು, ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಚಿಕ್ಕಮಗಳೂರು ತಾಲೂಕು ಮೂಗ್ತಿಹಳ್ಳಿ ಮತ್ತು ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ರಿಯ ಗ್ರಾಮಗಳಾದ ಮತ್ತಾವರ, ದಂಬದಹಳ್ಳಿ, ಶಿರಗುಂದ, ದುಂಗೆರೆ, ಮೂಗ್ತಿಹಳ್ಳಿ, ಕದ್ರಿಮಿದ್ರಿ ಹಾಗೂ ವಸ್ತಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣೆಕರೆ, ಗ್ರಾಮಗಳಲ್ಲಿ ಬಿಟ್ಟಮ್ಮ ಆನೆ ತಂಡವು ಸಂಚರಿಸುತ್ತಿದ್ದು ಸಾರ್ವಜನಿಕರ ಸುರಕ್ಷತೆ ದೃಷ್ಟಯಿಂದ ಮುಂಜಾಗ್ರತಾ ಕ್ರಮವಾಗಿ 10-11-20240 ರ ಸಂಜೆ 7ರಿಂದ 11-11-2024 ರ ರಾತ್ರಿ 9ರ ವರೆಗೆ ಕಾಡಾನೆ ಇರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸಾರ್ವಜನಿಕರಿಂದ ಕಾರ್ಯಾಚರಣೆಗೆ ತೊಂದರೆ ಉಂಟಾಗದಂತೆ ಸೂಕ್ತ ಭದ್ರತೆ ಒದಗಿಸಬೇಕಾಗಿ ವಲಯ ಅರಣ್ಯಾಧಿಕಾರಿ ಆಲ್ಲೂರು ವಲಯ ಚಿಕ್ಕಮಗಳೂರು ಅವರು ಕೋರಿರುತ್ತಾರೆ.

Edited By : PublicNext Desk
Kshetra Samachara

Kshetra Samachara

11/11/2024 01:38 pm

Cinque Terre

85.36 K

Cinque Terre

0

ಸಂಬಂಧಿತ ಸುದ್ದಿ