ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಭಕ್ತ ಕನಕದಾಸರ ಜಯಂತಿ ಅರ್ಥಪೂರ್ಣ ಆಚರಣೆಗೆ ತಾಲೂಕಾಡಳಿತ ನಿರ್ಧಾರ

ನವಲಗುಂದ: ಸರ್ಕಾರದ ನಿರ್ದೇಶನದಂತೆ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನ.18ರಂದು ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ ಸುಧೀರ ಸಾಹುಕಾರ ತಿಳಿಸಿದರು.

ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ನಡೆದ ಭಕ್ತ ಕನಕದಾಸ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರಿ ಕಚೇರಿಗಳಲ್ಲಿ ಭಕ್ತ ಕನಕದಾಸರ ಭಾವಚಿತ್ರ ಪೂಜೆ ಸಲ್ಲಿಸಲು ನಿರ್ದೇಶನ ನೀಡಲಾಗಿದೆ. ಕನಕದಾಸ ಕುರಿತು ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯನ್ನು ನೇಮಿಸಲಾಗುವುದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಹೇಳಿದರು.

ಹಾಲುಮತ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಪ್ರೇಮಾ ನಾಯ್ಕರ ಮಾತನಾಡಿ, ದಾಸ ಶ್ರೇಷ್ಠ ಕನಕದಾಸರು ಬರೀ ಕುರುಬ ಸಮಾಜಕ್ಕೆ ಸೀಮಿತರಾಗದೆ ಸರ್ವ ಜನಾಂಗದ ಶೋಷಿತರ ಧ್ವನಿಯಾಗಿದ್ದವರು. ಹೀಗಾಗಿ ತಾಲ್ಲೂಕಿನ ಸರ್ವ ಸಮಾಜದ ಮುಖಂಡರ ಜೊತೆಗೆ ಕುರುಬ ಸಮಾಜದ ಯುವಕರನ್ನು ಮುಖಂಡರನ್ನು ಒಗ್ಗೂಡಿಸುವುದರ ಜೊತೆಗೆ ಕುರುಬ ಸಮುದಾಯದ ಕಟ್ಟಕಡೆಯ ವ್ಯಕ್ತಿಯನ್ನು ಸೇರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ.

ತಾಲ್ಲೂಕಿನ ಗ್ರಾಮೀಣ ಹಾಗೂ ನಗರದ ಎಲ್ಲಾ ಬಂದುಗಳ ಜೊತೆಗೆ ಸಮಾಜದ ವಿವಿಧ ಸಂಘಟನೆಗಳನ್ನು ಗಣನೆಗೆ ತೆಗೆದುಕೊಂಡು ಕಾರ್ಯಕ್ರಮದ ರೂಪರೇಷೆಗಳೊಂದಿಗೆ ತಾಲ್ಲೂಕಾಡಳಿತದಿಂದ ನಡೆಯಲಿರುವ ಕನಕ ಜಯಂತೋತ್ಸವದಲ್ಲಿ ಎಲ್ಲರೂ ಭಾಗವಹಿಸಬೇಕು. ನಂತರ ತಮ್ಮ ಗ್ರಾಮಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಬೇಕು. ತಾಲೂಕಿನ ಸಮಾಜದ ಯುವಕರು ಕಾರ್ಯಕ್ರಮಕ್ಕೆ ಹೆಚ್ಚು ಜನರನ್ನು ಕರೆತರುವ ಮೂಲಕ ಸಮುದಾಯದ ಸಂಘಟನೆ ಹಾಗೂ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು ಎಂದು ಹೇಳಿದರು.

Edited By : PublicNext Desk
Kshetra Samachara

Kshetra Samachara

11/11/2024 04:05 pm

Cinque Terre

7.83 K

Cinque Terre

0

ಸಂಬಂಧಿತ ಸುದ್ದಿ