ಹಾವೇರಿ: ಹಾವೇರಿ ಜಿಲ್ಲೆ ಶಿಗ್ಗಾಂವ ಉಪ ಚುನಾವಣೆಯ ಮತದಾನಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ತಿಳಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು ನವೆಂಬರ್ 13ರಂದು ಮತದಾನ ನಡೆಯಲಿದ್ದು,
ಒಟ್ಟು 241 ಮತಗಟ್ಟೆ ಸ್ಥಾಪಿಸಲಾಗುತ್ತದೆ ಎಂದು ತಿಳಿಸಿದರು.
ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ರ‍್ಯಾಂಪ್, ಕುಡಿಯುವ ನೀರು, ವೀಲ್‌ಚೇರ್ ಸೌಲಭ್ಯಗಳ ವ್ಯವಸ್ಥೆ ಮಾಡಲಾಗಿದೆ. ವಿಶೇಷಚೇತನರಿಗೆ ವಾಹನದ ವ್ಯವಸ್ಥೆ ಸೇರಿದಂತೆ ಹಿರಿಯ ನಾಗರಿಕರಿಗೆ ಮತದಾನ ಮಾಡಲು ಆದ್ಯತೆಯ ಮೇರೆಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ತಿಳಿಸಿದರು.
ಒಟ್ಟು 1060 ಅಧಿಕಾರಿಗಳು ಮತ್ತು ಇತರ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ. ಪೊಲೀಸ್, ಗೃಹರಕ್ಷಕ ದಳ, ಸಿಆರ್‌ಪಿಎಫ್, ಸಿಎಪಿಎಫ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
PublicNext
11/11/2024 10:45 pm