ಧಾರವಾಡ: ಧಾರವಾಡದ ಕೆಐಎಡಿಬಿ ಎಇಇ ಗೋವಿಂದಪ್ಪ ಭಜಂತ್ರಿ ಅವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದಾರೆ.
ಧಾರವಾಡದ ಗಾಂಧಿನಗರದಲ್ಲಿರುವ ಗೋವಿಂದಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತ ಡಿವೈಎಸ್‌ಪಿ ವೆಂಕನಗೌಡ ಪಾಟೀಲ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಗೋವಿಂದಪ್ಪ ಅವರಿಗೆ ಸೇರಿದ ಧಾರವಾಡ ಗಾಂಧಿನಗರದಲ್ಲಿರುವ ಮನೆ, ತೇಜಸ್ವಿನಗರದಲ್ಲಿರುವ ಅಳಿಯನ ಮನೆ, ಸವದತ್ತಿ ತಾಲೂಕಿನ ಹೂಲಿ, ಉಗರಗೋಳ ಫಾರ್ಮ್‌ಹೌಸ್, ನರಗುಂದದಲ್ಲಿರುವ ಅವರ ಸಹೋದರನ ಮನೆ ಮತ್ತು ಲಕಮನಹಳ್ಳಿಯಲ್ಲಿರುವ ಕೆಐಎಡಿಬಿ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಗಾಂಧಿನಗರದಲ್ಲಿರುವ ಗೋವಿಂದಪ್ಪ ಅವರ ನಿವಾಸದ ಮುಂದೆ ಇದ್ದ ಅವರ ಕಾರುಗಳಲ್ಲಿಯೂ ಲೋಕಾಯುಕ್ತ ಪೊಲೀಸರು ಇಂಚಿಂಚು ತಪಾಸಣೆ ನಡೆಸಿದ್ದಾರೆ. ಅಲ್ಲದೇ ಅವರ ಆಸ್ತಿಗೆ ಸಂಬಂಧಿಸಿದ ಎಲ್ಲಾ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದು, ಗೋವಿಂದಪ್ಪ ಅವರಿಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ಲೋಕಾಯುಕ್ತರು ದಾಳಿ ನಡೆಸಿ ತಪಾಸಣೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/11/2024 11:12 am