ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ..? - ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ

ಬೆಂಗಳೂರು : ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಹೊರಬಿದಿದ್ದೆ. ಈ ಮೂಲಕ ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಶೇ.4% ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಚಿಂತನೆ ನಡೆದಿದೆ ಎನ್ನಲಾಗಿದೆ. ಈ ಕುರಿತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸರ್ಕಾರಕ್ಕೆ‌ ಪ್ರಸ್ತಾವನೆ ಸಲ್ಲಿಸಿದೆ, ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮಕ್ಕೆ ತಿದ್ದುಪಡಿ ತರಲು ಚಿಂತನೆ.ಈ ಕುರಿತು ಸರ್ಕಾರದ ಮಟ್ಟದಲ್ಲಿ ಗಂಭೀರ ಚಿಂತನೆ ನಡೆದಿದೆ.

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸರ್ಕಾರಕ್ಕೆ‌ ಸಲ್ಲಿಕಯಾಗಿರುವ ಪ್ರಸ್ತಾವನೆ ಪರಿಶೀಲಿಸುತ್ತಿರುವ ಸರ್ಕಾರ. ಬೆಳಗಾವಿ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿರುವ ಸರ್ಕಾರ ಎಸ್‌ಸಿ ಎಸ್‌ಟಿ ಸಮುದಾಯಕ್ಕೆ 24% ಗುತ್ತಿಗೆ ಮೀಸಲಾತಿ ನೀಡಲಾಗಿದೆ,OBC ಸಮುದಾಯಕ್ಕೆ 4% ಗುತ್ತಿಗೆ ಮೀಸಲಾತಿ ನೀಡಲಾಗಿದೆ,2A ಅಡಿ 15% ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ ಒಟ್ಟು ಸರ್ಕಾರದ ಕಾಮಗಾರಿಗಳಲ್ಲಿ 43% ಮೀಸಲಾತಿ ನೀಡಲಾಗಿದೆ.

ಈಗ ಮುಸ್ಲಿಂ ಸಮುದಾಯಕ್ಕೂ ಸರ್ಕಾರದ ಕಾಮಗಾರಿಗಳಲ್ಲಿ ಶೇ. 4 ರಷ್ಟು ಮೀಸಲಾತಿ ನೀಡಲು ಚಿಂತನೆ ನಡೆದಿದೆ. ಆಗಸ್ಟ್‌ನಲ್ಲೇ ರಾಜ್ಯ ಸರ್ಕಾರಕ್ಕೆ ಮುಸ್ಲಿಂ ಸಮುದಾಯದ ಜನಪ್ರತಿನಿಧಿಗಳಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ , ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ, ಆಸೀಪ್ ಸೇಠ, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕೀಶ್ ಬಾನುರಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಕಾಮಗಾರಿಯಲ್ಲಿ 4% ಮುಸ್ಲಿಂಮರಿಗೆ ಮೀಸಲಾತಿ ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದಾರೆ. ಮುಸ್ಲಿಂ ಶಾಸಕರ ಮನವಿ ಮೇರೆಗೆ ಆರ್ಥಿಕ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಎಲ್ಲವೂ ಅಂದುಕೊಂಡ ಹಾಗೇ ನಡೆದರೆ ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯುವ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

Edited By : Abhishek Kamoji
PublicNext

PublicNext

12/11/2024 11:18 am

Cinque Terre

42.18 K

Cinque Terre

4