ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸ, ಕಚೇರಿ ಮೇಲೆ ಲೋಕಾ ದಾಳಿ

ಬೀದರ್: ಅಕ್ರಮ‌ ಆಸ್ತಿ‌ ಗಳಿಕೆ‌ ಆರೋಪ‌ ಹಿನ್ನಲೆ‌ ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ರವೀಂದ್ರ ರೊಟ್ಟಿ‌ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ‌ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಗುಂಪಾದಲ್ಲಿರುವ ನಿವಾಸ ಮತ್ತು‌ ಕಚೇರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಇದಕ್ಕೂ ಮೊದಲು ಬೀದರ್ ಡಿಸಿ ಕಚೇರಿಯಲ್ಲಿ ಶಿರೆಸ್ತಾದಾರ ಹಾಗೂ ಬಿಬಿಎಂಪಿಯಲ್ಲಿ ಅಧಿಕಾರಿಯಾಗಿ ರವೀಂದ್ರ ಅವರು ಕಾರ್ಯನಿರ್ವಹಿಸುತ್ತಿದ್ದರು

ವರದಿ:ಯೋಹಾನ್ ಪಿ ಹೊನ್ನಡ್ಡಿ ಬೀದರ್

Edited By : Vinayak Patil
PublicNext

PublicNext

12/11/2024 11:52 am

Cinque Terre

18.75 K

Cinque Terre

0

ಸಂಬಂಧಿತ ಸುದ್ದಿ