ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕಾಮಗಾರಿಗಳಲ್ಲಿ ಮುಸ್ಲಿಮ್‌ರಿಗೆ ಮೀಸಲಾತಿ - ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ, ಸಿಎಂ‌ ಸ್ಪಷ್ಟನೆ

ಬೆಂಗಳೂರು : ಕಾಮಗಾರಿಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬೆನ್ನಲ್ಲೇ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ,ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಶೇ.4% ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಬೇಕು ಎಂದು ಆಗಸ್ಟ್ ನಲ್ಲೇ ರಾಜ್ಯ ಸರ್ಕಾರಕ್ಕೆ ಮುಸ್ಲಿಂ ಸಮುದಾಯದ ಜನಪ್ರತಿನಿಧಿಳಾದ ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ , ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ತನ್ವೀರ್ ಸೇಠ, ಅಬ್ದುಲ್ ಜಬ್ಬಾರ್, ಎನ್ ಎ ಹ್ಯಾರಿಸ್, ರಿಜ್ವಾನ್ ಅರ್ಷದ, ಆಸೀಪ್ ಸೇಠ, ಖನೀಜಾ ಫಾತಿಮಾ, ಇಕ್ಬಾಲ್ ಹುಸೇನ್, ಬಲ್ಕೀಶ್ ಬಾನುರಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆಯಲಾಗಿದೆ.

ಪತ್ರದಲ್ಲಿ ಕಾಮಗಾರಿಯಲ್ಲಿ 4% ಮುಸ್ಲಿಂಮರಿಗೆ ಮೀಸಲಾತಿ ನೀಡುವಂತೆ ಸಿಎಂಗೆ ಮನವಿ ಮಾಡಿದ್ದರು. ಬೆಳಗಾವಿ ಅಧಿವೇಶನದ ವೇಳೆ ಕಾಯ್ದೆಗೆ ತಿದ್ದುಪಡಿ ತಂದು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆದಿದೆ ಎಂಬ ಸುದ್ದಿ ಹಬ್ಬಿತ್ತು. ಆದ್ರೆ ಇದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ ಮೀಸಲಾತಿ ನೀಡಬೇಕೆಂಬ ಬೇಡಿಕೆ ಬಂದಿರುವುದು ನಿಜ. ಆದರೆ, ಈ ಕುರಿತು ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Edited By : Abhishek Kamoji
PublicNext

PublicNext

12/11/2024 12:05 pm

Cinque Terre

35.89 K

Cinque Terre

3