ಕೊಡಗು: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ವಿವಿಧ ಸಂಘ- ಸಂಸ್ಥೆಗಳು, ಕನ್ನಡಾಭಿಮಾನಿಗಳು ಹಾಗೂ ನಾಗರಿಕರ ಸಮ್ಮುಖದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ 50 ಹಾಗೂ 69 ನೇ ಕನ್ನಡ ರಾಜ್ಯೋತ್ಸವದ 2024 ರ ಅಂಗವಾಗಿ ಕುಶಾಲನಗರ ಪಟ್ಟಣದ ರಥಬೀದಿಯ ಗಣಪತಿ ದೇವಸ್ಥಾನದ ಬಳಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಐದು ಸಾವಿರ ಮಂದಿಯಿಂದ ಏಕಕಾಲದಲ್ಲಿ ಕನ್ನಡ ಕಂಠ ಗಾಯನ ಕಾರ್ಯಕ್ರಮ ಏರ್ಪಡಿಸಿದ್ದು ಕನ್ನಡ ಕಂಠ ಗಾಯನ ಕಾರ್ಯಕ್ರಮವು ಯಶಸ್ವಿಯಾಗಿ ಜನಮನ್ನಣೆ ಗಳಿಸಿತು.
ಕಾರ್ಯಕ್ರಮಕ್ಕೂ ಮುನ್ನಾ ಬೈಚನಹಳ್ಳಿ ಮಾರಮ್ಮ ದೇವಾಲಯ ಬಳಿ ತಾಲೂಕು ಆಡಳಿತ, ಕಸಾಪ ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಅಖಿಲಭಾರತ 87ನೇ ಸಾಹಿತ್ಯ ಸಮ್ಮೇಳನದ ಪ್ರಚಾರ ರಥವನ್ನು ಅದ್ದೂರಿಯಾಗಿ ಬರಮಾಡಿಕೊಂಡು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದವರೆಗೆ ಮೆರವಣಿಗೆಯ ಮೂಲಕ ಕರೆತರಲಾಯಿತು.
ಕರ್ನಾಟಕದಲ್ಲಿ ಕನ್ನಡ ಮುಂಚೂಣಿ ಭಾಷೆಯಾಗಿ ಉಳಿದುಕೊಂಡಿದ್ದು, ಕನ್ನಡ ಭಾಷೆ ಉಳಿಸುವ ನಿಟ್ಟಿನಲ್ಲಿ ಎಲ್ಲರೂ ನಾಡು- ನುಡಿ, ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಸಂರಕ್ಷಿಸುವಲ್ಲಿ ಒಗ್ಗಟ್ಟಿನಿಂದ ಪ್ರೋತ್ಸಾಹ ನೀಡುವ ಮೂಲಕ ಭಾಷಾ ಬೆಳವಣಿಗೆಗೆ ಶ್ರಮಿಸಬೇಕು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ ಮನವಿ ಮಾಡಿದರು.
PublicNext
12/11/2024 12:33 pm