ಶಾರ್ಜಾ : ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ಅಫ್ಘಾನಿಸ್ತಾನದ ಬ್ಯಾಟರ್ ರಹಮಾನುಲ್ಲಾ ಗುರ್ಬಾಝ್ ಹೊಸ ದಾಖಲೆಯೊಂದನ್ನು ಬರೆದಿದ್ದು, ಅತೀ ಕಡಿಮೆ ವಯಸ್ಸಿನಲ್ಲಿ ಅತ್ಯಧಿಕ ಶತಕ ಸಿಡಿಸಿದ ಏಷ್ಯನ್ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಶಾರ್ಜಾ ದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಗುರ್ಬಾಝ್ 120 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 101 ರನ್ ಬಾರಿಸಿದ್ದರು. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಅತೀ ಕಡಿಮೆ ವಯಸ್ಸಿನಲ್ಲಿ ಅತ್ಯಧಿಕ ಶತಕ ಸಿಡಿಸಿದ ಬ್ಯಾಟರ್ ಎನಿಸಿಕೊಂಡರು.
ಈ ಹಿಂದೆ ಈ ದಾಖಲೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು 22 ವರ್ಷ 357 ದಿನದಲ್ಲಿ, ವಿರಾಟ್ ಕೊಹ್ಲಿ 23 ವರ್ಷ 27 ದಿನದಲ್ಲಿ ಈ ಸಾಧನೆ ಮಾಡಿದ್ದರು. ಪಾಕಿಸ್ತಾನದ ಬ್ಯಾಟರ್ ಬಾಬರ್ ಅಝಂ 23 ವರ್ಷ 280 ದಿನದಲ್ಲಿ ಎಂಟನೇ ಏಕದಿನ ಶತಕ ಗಳಿಸಿದ್ದರು.
ಆದರೆ ಇದೀಗ ಗುರ್ಬಾಝ್ ತನ್ನ 22 ನೇ ವರ್ಷ 349 ದಿನದಲ್ಲಿ 8ನೇ ಶತಕ ಸಿಡಿಸುವ ಮೂಲಕ ವಿರಾಟ್ ಕೊಹ್ಲಿ ಹಾಗೂ ಸಚಿನ್ ತೆಂಡೂಲ್ಕರ್, ಬಾಬರ್ ದಾಖಲೆ ಮುರಿದಿದ್ದಾರೆ. ಇನ್ನು ಎಂಟು ಏಕದಿನ ಶತಕವನ್ನು ಅತ್ಯಂತ ಎಳೆ ವಯಸ್ಸಿನಲ್ಲಿ ಸಿಡಿಸಿದ ದಾಖಲೆ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿಕಾಕ್ ಹೆಸರಿನಲ್ಲಿದೆ.
PublicNext
12/11/2024 12:36 pm