ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಜ್ಯುಬಿಲಿ ವೃತ್ತ ಬಂದ್

ಧಾರವಾಡ: ರೈತರ ಪಹಣಿ ಪತ್ರಿಕೆ ಸೇರಿದಂತೆ ಇತರ ಆಸ್ತಿಗಳಲ್ಲಿ ಸದರಿ ಆಸ್ತಿ ವಕ್ಫ ಆಸ್ತಿಗೆ ಒಳಪಟ್ಟಿದೆ ಎಂದು ನಮೂದಾಗಿದ್ದರಿಂದ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಮಂಗಳವಾರ ಧಾರವಾಡದಲ್ಲೂ ಬಜರಂಗದಳ, ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಧಾರವಾಡ ಜ್ಯುಬಿಲಿ ವೃತ್ತ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಕಡಪಾ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬಂದ ಕಾರ್ಯಕರ್ತರು, ಜ್ಯುಬಿಲಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ವೃತ್ತವನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಇದರಿಂದ ಕೆಲ ಗಂಟೆಗಳ ಕಾಲ ವಾಹನ ದಟ್ಟನೆ ಉಂಟಾಯಿತು.

ರೈತರ ಪಹಣಿ ಪತ್ರಿಕೆಯ ಕಾಲಂ ನಂಬರ್ 11ರಲ್ಲಿ ಈ ಆಸ್ತಿ ವಕ್ಫ್ ಆಸ್ತಿಗೆ ಒಳಪಟ್ಟಿದೆ ಎಂದು ನಮೂದಾಗಿದೆ. ಇದನ್ನು ಹಿಂಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕೇವಲ ಬಾಯಿ ಮಾತಿನಲ್ಲಿ ಹೇಳಿದರೆ ಸಾಲುವುದಿಲ್ಲ ಈ ಬಗ್ಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿ ರೈತರ ಪಹಣಿ ಪತ್ರಿಕೆಯಲ್ಲಿ ನಮೂದಾಗಿರುವ ವಕ್ಫ ಆಸ್ತಿ ಎಂಬ ಶಬ್ದವನ್ನು ತೆಗೆದು ಹಾಕಬೇಕು ಇಲ್ಲದೇ ಹೋದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬಂದು ಪ್ರತಿಭಟನಾಕಾರರಿಂದ ಮನವಿ ಪಡೆದುಕೊಂಡರು.

ಕೆಲ ಕಾಲ ಜ್ಯುಬಿಲಿ ವೃತ್ತ ಬಂದ್ ಮಾಡಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಈ ವೇಳೆ ಪೊಲೀಸರು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಿ ಇಲ್ಲದೇ ಹೋದರೆ ಎಲ್ಲರನ್ನೂ ಬಂಧಿಸಬೇಕಾಗುತ್ತದೆ ಎಂದಿದ್ದರಿಂದ ಪ್ರತಿಭಟನಾನಿರತ ಹಿಂದೂ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ತೀವ್ರ ಮಾತಿನ ಚಕಮಕಿ ನಡೆಯಿತು. ಕೊನೆಗೆ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿ ಕರೆದೊಯ್ದು ನಂತರ ಬಿಡುಗಡೆ ಮಾಡಿದರು. ಈ ಪ್ರತಿಭಟನೆಗೆ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿಜಯಾನಂದ ಸರಸ್ವತಿ ಸ್ವಾಮೀಜಿ, ದೇವರ ಹುಬ್ಬಳ್ಳಿ ಸ್ವಾಮೀಜಿ, ಮಾಜಿ ಶಾಸಕಿ ಸೀಮಾ ಮಸೂತಿ ಸಹ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದ್ದಲ್ಲದ್ದೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

Edited By : Suman K
Kshetra Samachara

Kshetra Samachara

12/11/2024 02:27 pm

Cinque Terre

40.12 K

Cinque Terre

2

ಸಂಬಂಧಿತ ಸುದ್ದಿ