ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ : ಅಕ್ರಮ ಮರಳು ದಂಧೆ ತಡೆಗಟ್ಟಲು ಆಗ್ರಹ

ಗದಗ : ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯ ಅಕ್ಕಿಗುಂದ, ಬಟ್ಟೂರ. ಬಡ್ಡಿ, ಅಮರಾಪೂರ, ಹುಲ್ಲೂರು. ಅದರಹಳ್ಳಿ, ಕೊಗನೂರ ಗ್ರಾಮ ವ್ಯಾಪ್ತಿಯ ಸರ್ಕಾರಿ ಜಮೀನಿನಲ್ಲಿ ಅಕ್ರಮ ಮರಳು ಗಣಿಗಾರಿಕೆ, ಸಾಗಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದನ್ನು ತಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಶರಣು ಗೋಡಿ ನೇತೃತ್ವದಲ್ಲಿ ತಹಸೀಲ್ದಾರಗೆ ಮನವಿ ಸಲ್ಲಿಸಲಾಯಿತು.

ತಾಲೂಕಿನಲ್ಲಿ ಮರಳು ಅಕ್ರಮ ಸಾಗಾಟ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಮರಳು ಸಾಗಿಸುವ ಟಿಪ್ಪರ್ ಮತ್ತು ಲಾರಿಗಳು ಪಾಸ್ ತೆಗೆದುಕೊಂಡರೂ ಒಂದೇ

ಪಾಸ್‌ನಲ್ಲಿ ಎಲ್ಲೆಂದರಲ್ಲಿಗೆ ನಾಲೈದು ಬಾರಿ ಮರಳು ಸಾಗಾಟ ಮಾಡುತ್ತಿದ್ದಾರೆ. ಲಾರಿ ಮತ್ತು ಟಿಪ್ಪರ್ ಗಳಿಗೆ ಜಿಪಿಎಸ್ ಇದ್ದರೂ ಸಹ ನಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಕಣ್ಣು ತಪ್ಪಿಸಿ ಜಿಪಿಎಸ್ ಬಂದ್ ಮಾಡಿ ಮರಳು ಗುತ್ತಿಗೆದಾರರ ಜೊತೆ ಹೊಂದಾಣಿಕೆಯಾಗಿ ಸಕ್ರಮದ ಜೊತೆ ಅಕ್ರಮ ಮರಳು ಸಾಗಣೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಮಾಡುತ್ತಿದ್ದಾರೆ. ಮರಳು ದಂಧೆ- ಕೋರರ ಮೇಲೆ ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆ ತಾಲೂಕಾಧ್ಯಕ್ಷ ನಾಗೇಶ ಅಮರಾಪುರ, ಜಿಲ್ಲಾ ಕಾರ್ಯಾಧ್ಯಕ್ಷ ಇಸ್ಮಾಯಿಲ್ ಅಡೂರ, ಪ್ರವೀಣ ಆಚಾರಿ, ಯಲ್ಲಪ್ಪ ಹಂಜಗಿ, ಅಷ್ಟಾಕ ಬಾಗೋಡಿ- ಕೈಸರ ಮಹಮ್ಮದ ಆಲಿ, ಅಭಿಷೇಕಾ ಸಾತಪುತೆ, ದುದ್ದು ಅಕ್ಕಿ, ನಾಸೀರಾ ಸಿದ್ದಿ, ಸುಲೇಮಾನ ಬಾರಿಗಿಡದ, ಮುಕ್ತಿಯಾರ ಜಮಖಂಡಿ. ನದಿಮ್ ಕುಂದಗೋಳ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

Edited By : PublicNext Desk
PublicNext

PublicNext

12/11/2024 04:10 pm

Cinque Terre

7.83 K

Cinque Terre

0

ಸಂಬಂಧಿತ ಸುದ್ದಿ