ಚಿಕ್ಕಮಗಳೂರು : ಲೋಕಾಯುಕ್ತ ಕಛೇರಿ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 11 ಗಂಟೆಗೆ ಮೂಡಿಗೆರೆ ತಾಲ್ಲೂಕು ಪಂಚಾಯ್ತಿ ಕಛೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಲೋಕಾಯುಕ್ತ ಜನ ಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಛೇರಿ, ಚಿಕ್ಕಮಗಳೂರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
12/11/2024 04:59 pm