ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ನವೆಂಬರ್ 14ರಂದು ಧರ್ಮಸ್ಥಳಕ್ಕೆ

ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ವತಿಯಿಂದ ನವೆಂಬರ್ 14ರಂದು ಧರ್ಮಸ್ಥಳದ ಅಮೃತವರ್ಷಿಣಿಯಲ್ಲಿ ನಡೆಯಲಿರುವ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌, ನಬಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಶಾಜಿ. ಕೆ.ವಿ. ಮುಂಬಯಿ, ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ. ಹೆಗ್ಗಡೆ, ಸಂಸದ ಬ್ರಿಜೇಶ್‌ ಚೌಟ, ಶಾಸಕ ಹರೀಶ್‌ ಪೂಂಜ ಮುಂತಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ನವೆಂಬರ್ 13: ವಿತ್ತ ಸಚಿವೆಯೊಂದಿಗೆ ಮಂಗಳೂರಿನಲ್ಲಿ ಸಂವಾದ

ಸಿಟಿಝನ್‌ ಕೌನ್ಸಿಲ್‌ ಮಂಗಳೂರು ಚಾಪ್ಟರ್‌ ವತಿಯಿಂದ ಕೇಂದ್ರದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌‌ರೊಂದಿಗೆ ಅನೌಪಚಾರಿಕ ಸಂವಾದ ಕಾರ್ಯಕ್ರಮ ನವೆಂಬರ್ 13ರಂದು ಸಂಜೆ 6.30ಕ್ಕೆ ನಗರದ ಟಿ.ಎಂ.ಪೈ ಕನ್ವೆನ್ಶನ್‌ ಸೆಂಟರ್‌ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸು ವವರು https://forms.gle/TZDfNHZVtmSHgnaj6 ಲಿಂಕ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು ಎಂದು ಕೌನ್ಸಿಲ್‌ ಪ್ರಕಟನೆ ತಿಳಿಸಿದೆ.

Edited By : Nagaraj Tulugeri
Kshetra Samachara

Kshetra Samachara

12/11/2024 06:13 pm

Cinque Terre

2.81 K

Cinque Terre

0

ಸಂಬಂಧಿತ ಸುದ್ದಿ