ಬೆಂಗಳೂರು: ಕಾಂಗ್ರೆಸ್ ಪಕ್ಷದ ಬಕಾಸುರ ಮತ್ತು ಭಸ್ಮಾಸುರನ ವರ್ತನೆಗೆ ರಾಜ್ಯದ ಜನತೆ ಪಾಠ ಕಲಿಸಬೇಕು. ಭಸ್ಮಾಸುರ ಹಾಗೂ ಬಕಾಸುರನಂತೆ ವರ್ತನೆ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ನಾಳೆ ನಡೆಯುವ ಉಪ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಟಿ ರವಿ, ವಕ್ಫ್ ಬೋರ್ಡ್ ಹೆಸರಿನಲ್ಲಿ ನಮ್ಮ ಭೂಮಿ ಕಿತ್ತುಕೊಳ್ಳುವ ಕೆಲಸ, ರೈತರ, ದಲಿತರ ಭೂಮಿ ಕಿತ್ತುಕೊಳ್ಳುವ ಕೆಲಸ ನಡೆಯವುದನ್ನು ನಾವು ನೋಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಆಧುನಿಕ ಭಸ್ಮಾಸುರನಂತೆ ವರ್ತಿಸುತ್ತಿದೆ. ಬಕಾಸುರ ಮತ್ತು ಭಸ್ಮಾಸುರ ಎರಡೂ ಸೇರಿದರೆ ಏನಾಗುತ್ತದೋ ಅದು ಕಾಂಗ್ರೆಸ್ ಆಗಿದೆ ಎಂದು ಆರೋಪಿಸಿದರು.
PublicNext
12/11/2024 07:01 pm