ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ಆಶಾ ಕಾರ್ಯಕರ್ತೆಯರು ಸಕ್ಕರೆ ಕಾಯಿಲೆ ಬಗ್ಗೆಯೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲಿ - SP ಮಿಥುನ್ ಕುಮಾರ್

ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಸಕ್ಕರೆ ಕಾಯಿಲೆ ಬಗ್ಗೆಯೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ವಿನ್ ಲೈಫ್ ಟ್ರಸ್ಟ್ ವತಿಯಿಂದ ಡಾ. ಪೃಥ್ವಿ ನೇತೃತ್ವದಲ್ಲಿ ಆಯೋಜಿಸಿದ್ದ ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಮಧು ಮೇಹ ಮತ್ತು ತುರ್ತು ಜೀವ ರಕ್ಷಕ( ಸಿಪಿಆರ್ ) ಕುರಿತು ಆಯೋಜಿಸಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊರೋನಾ ಸಂದರ್ಭದಲ್ಲಿ ನಾನು ಚಿಕ್ಕಬಳ್ಳಾಪುರದಲ್ಲಿದ್ದೆ. ಆಗ ಆಶಾ ಕಾರ್ಯಕರ್ತೆಯರು ಜೀವ ಭಯ ತೊರೆದು ಮನೆ ಮನೆಗೆ ತೆರಳಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದ್ದು, ಕೊರೋನಾ ಬಂದ ಜನರ ಆರೈಕೆ ಮಾಡಿದ್ದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಇದು ಚಿಕ್ಕಬಳ್ಳಾಪುರ ಮಾತ್ರವಲ್ಲ ಇಡೀ ದೇಶದಲ್ಲಿಯೇ ಅವರು ಅಪಾರವಾಗಿ ಸೇವೆ ಸಲ್ಲಿಸಿದರು ಎಂದು ಶ್ಲಾಘಿಸಿದ ಅವರು, ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಸಕ್ಕರೆ ಕಾಯಿಲೆಯ ಬಗ್ಗೆ ದೊಡ್ಡ ಜಾಗೃತಿ ಆಂದೋಲನವನ್ನೇ ಮಾಡಬಹುದು. ಆಗ ಈ ಕಾರ್ಯಕ್ರಮ ಸಾರ್ಥಕವಾಗಲಿದೆ ಎಂದರು.

ಸಕ್ಕರೆ ಕಾಯಿಲೆ ನಮ್ಮ ಜೀವನ ಶೈಲಿಗೆ ಸಂಬಂಧಿಸಿದ ಕಾಯಿಲೆ. ಈಗ ಬದಲಾದ ನಮ್ಮ ಜೀವನಶೈಲಿಯ ಕಾರಣಕ್ಕೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಎನ್ನುವುದು ಮಾಮೂಲು ಆಗಿದೆ. ಹಾಗಂತ ಇದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಇದು ತುಂಬಾ ಅಪಾಯಕಾರಿ ಕಾಯಿಲೆ. ಅದಾಗ್ಯೂ ಇದನ್ನು ಸರಿಯಾಗಿ ನಿರ್ವಹಣೆ ಮಾಡಿಕೊಂಡರೆ ಯಾವುದೇ ಆತಂಕವಿಲ್ಲದೆ ಬದುಕುಬಹುದು ಎಂದ ಅವರು, ಅದಕ್ಕೆ ತಂದೆ ಯವರನ್ನೇ ಉದಾಹರಿಸಿದರು.

ಈ ವೇಳೆ ಜಿಲ್ಲಾ ರಕ್ಷಣಾಧಿಕಾರಿಗಳು ಕ್ಯೂಆರ್ ಸ್ಕ್ಯಾನ್ ಚಾಲನೆ ನೀಡಿದರು. 1200 ಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಈ ಕಾರ್ಯಾಗಾರದ ಸದುಪಯೋಗ ಪಡಿಸಿಕೊಂಡರು.

Edited By : Ashok M
PublicNext

PublicNext

12/11/2024 07:28 pm

Cinque Terre

19.4 K

Cinque Terre

0