ಪುತ್ತೂರು: ವಿಟ್ಲದಿಂದ ಕಬಕ- ಪುತ್ತೂರು ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ವೋಕ್ಸ್ ವೇಗನ್ ಕಾರೊಂದು ಕಂಬಳಬೆಟ್ಟು ಎಂಬಲ್ಲಿ ಮುಂಭಾಗದಲ್ಲಿ ಬರುತ್ತಿದ್ದ ಬೈಕ್‌ಗೆ ಮುಖಾಮುಖಿಯಾಗಿ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಕಲ್ಲು ರಾಶಿ ಹಾಕಿದ್ದ ದಿಬ್ಬದ ಮೇಲೇರಿ ಹೋಗಿ ತಲೆ ಕೆಳಗಾಗಿ ಬಿದ್ದ ಘಟನೆ ನಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ.
ವಿಟ್ಲ - ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಅನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳೆದುಕೊಂಡಿದೆ. ಪರಿಣಾಮ ಕಾರು ರಸ್ತೆ ಬದಿಯಲ್ಲಿ ಹಾಕಿದ್ದ ರಾಶಿ ಹಾಕಿದ್ದ ಕಲ್ಲಿನ ದಿಬ್ಬದ ಮೇಲೇರಿ ಬಿದ್ದಿದೆ. ಮತ್ತೊಂದು ಕಡೆ ನಿಲ್ಲಿಸಿದ್ದ ಬೈಕ್‌ಗೆ ಡಿಕ್ಕಿಯಾಗಿ ಅದು ಮಣ್ಣಿನ ದಿಬ್ಬದ ಮೇಲೆ ಬಿದ್ದಿದೆ.
ಗಾಯಾಳು ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂ ಆಗಿದ್ದು, ಮರದ ಎಡೆಯಲ್ಲಿ ಸಿಲುಕಿಕೊಂಡಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
Kshetra Samachara
12/11/2024 07:39 pm