ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಎಚ್‌ಡಿಕೆ ವಿರುದ್ಧ ಸಚಿವ ಜಮೀರ್ ಅವಹೇಳನಕಾರಿ ಹೇಳಿಕೆ - ಪ್ರಕರಣ ದಾಖಲು

ಚಿಕ್ಕಮಗಳೂರು : ರಾಜ್ಯದಲ್ಲಿ ಬೈ ಎಲೆಕ್ಷನ್ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು . ಮೂರು ಕ್ಷೇತ್ರಗಳ ಪೈಕಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಭಾನುವಾರ ಚನ್ನಪಟ್ಟಣದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಸಚಿವ ಜಮೀರ್ ಅಹ್ಮದ್​ ​ಕಪ್ಪು ವರ್ಣದ ಜನಾಂಗದವರನ್ನು ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.

ಹೀಗಾಗಿ ಜಮೀರ್ ಅಹ್ಮದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣದಲ್ಲಿ ಆರ್.ಟಿ.ಐ ಕಾರ್ಯಕರ್ತ ಆನಂದ್ ನಾಯ್ಕ್ ಎಂಬುವವರು ಹೆಚ್ಡಿಕೆಯವರನ್ನು ಕಪ್ಪು ವರ್ಣಿಯರಿಗೆ ಹೋಲಿಸಿ ನೋವಾಗುವ ರೀತಿಯಲ್ಲಿ ನಿಂದನೆ ಮಾಡಿದ್ದು, ಅಲ್ಲದೇ ಒಂದು ಸಮುದಾಯವನ್ನು ಎತ್ತಿ ಕಟ್ಟಿ ಸಮಾಜದಲ್ಲಿ ಶಾಂತಿಭಂಗ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆರ್.ಟಿ.ಐ ಕಾರ್ಯಕರ್ತ ಆನಂದ್ ನಾಯ್ಕ್ ಎಂಬುವವರು ಸಖರಾಯಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Edited By : PublicNext Desk
PublicNext

PublicNext

12/11/2024 07:42 pm

Cinque Terre

16.41 K

Cinque Terre

1

ಸಂಬಂಧಿತ ಸುದ್ದಿ