ಬೆಂಗಳೂರು: ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ಮೂಲದ ಸೈಯದ್ ಅಸ್ಲಾಂ, ಬೆಂಗಳೂರಿನ ಆರ್.ಟಿ ನಗರ ಮೂಲದ ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ.
ಮನೆಗಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಆರೋಪಿಗಳು ಇತ್ತೀಚೆಗೆ
ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಬೀಗ ಮುರಿದು ಲಕ್ಷ್ಮೀ ಚಿನ್ನದ ಹಾರ, ಗುಂಡಿನ ಸರ, ಜುಮುಕಿ ಸೇರಿ 400 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ರು. ಈ ಸಂಬಂಧ ಮನೆ ಮಾಲೀಕರು ಕಳ್ಳತನ ಪ್ರಕರಣ ದಾಖಲಿಸಿದ್ರು. ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ 15 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಎರಡು ಬೈಕ್ಗಳು ವಶಕ್ಕೆ ಪಡೆದಿದ್ದಾರೆ.
PublicNext
12/11/2024 07:50 pm