ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಾರ್ಮಿಕರ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ - ಜಿಲ್ಲಾಧಿಕಾರಿ ಕರೆ

ಉಡುಪಿ: ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅವರ ಪರವಾದ ಕಾನೂನುಗಳಿವೆ. ಅವುಗಳನ್ನು ಸರಿಯಾಗಿ ಅರ್ಥಮಾಡಿಕೊಂಡು ಉದ್ಯೋಗದಾತರು ಸರಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಮಿಕರನ್ನು ನೇಮಿಸಿ ಕೊಳ್ಳಬೇಕು. ಕಾರ್ಮಿಕರ ದುಡಿಮೆಗೆ ಅನುಗುಣವಾಗಿ ಕನಿಷ್ಠ ವೇತನ ಕಾಯಿದೆಯಂತೆ ಸಂಬಳ, ಸಾಮಾಜಿಕ ಭದ್ರತಾ ಸೌಲಭ್ಯಗಳಾದ ಇ.ಎಸ್.ಐ, ಪಿಎಫ್, ಹೆಚ್ಚುವರಿ ಕೆಲಸ ಮಾಡಿಸಿಕೊಂಡಲ್ಲಿ ಹೆಚ್ಚುವರಿ ಪೇಮೆಂಟ್ ನೀಡಬೇಕು. ಅಲ್ಲದೇ ಕಾರ್ಮಿಕರು ಸುರಕ್ಷತೆಯಿಂದ : ಮಾಡಲು ಸುರಕ್ಷಿತ ವಾತಾವರಣವನ್ನು ಅವರಿಗೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ

ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ದರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆ ಹಾಗೂ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ, ಕಾರ್ಮಿಕ ಇಲಾಖೆಯಿಂದ ಹಾಗೂ ಇತರೆ ಇಲಾಖೆಗಳಿಂದ ಅನುಷ್ಠಾನ ಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ಮಾತನಾಡುತ್ತಿದ್ದರು. ಉದ್ಘಾಟಿಸಿ ಅವರು ಕಾರ್ಮಿಕ ಕಾಯ್ದೆಗಳು ಬಲಿಷ್ಠವಾಗಿವೆ. ಇವುಗಳ ಬಗ್ಗೆ ಉದ್ಯೋಗದಾತರಿಗೆ ಕಾನೂನಿನ ಅರಿವು ಮೂಡಿಸಿ, ಆ ಮೂಲಕ ಕಾರ್ಮಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ಸರಿಯಾಗಿ ನೀಡುವಂತೆ ನೋಡಿಕೊಳ್ಳಿ .ಮಾನವೀಯ ನೆಲೆಯೊಂದಿಗೆ ಕಾನೂನಿನ ಅಡಿಯಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುವ ಬಗ್ಗೆ ತಿಳುವಳಿಕೆ ಮೂಡಿಸಿದಾಗ ಕಾಯಿದೆಗಳು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳ್ಳುತ್ತವೆ ಎಂದವರು ನುಡಿದರು.

Edited By : PublicNext Desk
Kshetra Samachara

Kshetra Samachara

12/11/2024 09:01 pm

Cinque Terre

1.41 K

Cinque Terre

0

ಸಂಬಂಧಿತ ಸುದ್ದಿ