ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: ಚರಂತಿಪೇಟೆ ರಾಜ್ಯ ಹೆದ್ದಾರಿ ತಾತ್ಕಾಲಿಕ ದುರಸ್ತಿ - ಪಬ್ಲಿಕ್ ನೆಕ್ಸ್ಟ್ ವರದಿ ಫಲಶ್ರುತಿ

ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಚರಂತಿಪೇಟೆ ಬಳಿ ರಸ್ತೆ ಹೊಂಡಮಯವಾಗಿದ್ದು ಸಂಚಾರಕ್ಕೆ ದುಸ್ತರವಾಗಿದೆ. ಈ ಭಾಗದಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿದರೂ ತಾತ್ಕಾಲಿಕ ನೆಲೆಯಲ್ಲಿ ರಸ್ತೆ ದುರಸ್ತಿಗೊಳಿಸಿಲ್ಲ ಎಂದು ಸ್ಥಳೀಯರು ಹಠಾತ್ ಪ್ರತಿಭಟನೆ ನಡೆಸಿದ್ದಾರೆ.

ಕೂಡಲೇ ಸ್ಥಳಕ್ಕೆ ಆಗಮಿಸಿದ ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಸದಸ್ಯ ಹರ್ಷರಾಜ ಶೆಟ್ಟಿ ಮಾಜಿ ಅಧ್ಯಕ್ಷ ಸುಭಾಶ್ ಶೆಟ್ಟಿ, ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ್ದಾರೆ. ಹಾಗೂ ಮುಂದಿನ ಹದಿನೈದು ದಿನಗಳ ಒಳಗಾಗಿ ರಸ್ತೆ ದುರಸ್ತಿ ಮಾಡುವ ಭರವಸೆ ನೀಡಿದಂತೆ ತಾತ್ಕಾಲಿಕ ನೆಲೆಯಲ್ಲಿ ಡಾಮರೀಕರಣ ಗೊಳಿಸಲಾಗಿದೆ. ಆದರೆ ಭಾರಿ ಮಳೆ ಬಂದರೆ ರಸ್ತೆ ಮತ್ತೆ ಹೊಂಡ ಮಯವಾಗುವ ಸಾಧ್ಯತೆ ಇದೆ. ರಸ್ತೆ ಅವ್ಯವಸ್ಥೆ ಬಗ್ಗೆ ಗಮನ ಸೆಳೆದ ಪಬ್ಲಿಕ್ ನೆಕ್ಸ್ಟ್‌ಗೆ ಸಾರ್ವಜನಿಕರು ಧನ್ಯವಾದ ಅರ್ಪಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

12/11/2024 09:54 pm

Cinque Terre

2.75 K

Cinque Terre

0

ಸಂಬಂಧಿತ ಸುದ್ದಿ