ನಂಜನಗೂಡು: ಪಬ್ಲಿಕ್ ನೆಕ್ಸ್ಟ್ ವರದಿಗೆ ಎಚ್ಚೆತ್ತು ದೊಡ್ಡಕವಲಂದೆ ಸರ್ಕಾರಿ ಕನ್ನಡ ಶಾಲೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿದ್ದಾರೆ.
ಎಸ್... ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶೌಚಾಲಯ ಇಲ್ಲದೆ ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯರು ಬಯಲು ಶೌಚಾಲಯಕ್ಕೆ ಹೋಗುತ್ತಿದ್ದರು. ಶೌಚಾಲಯ ನಿರ್ಮಾಣ ಮಾಡದೆ ಇದ್ದಲ್ಲಿ ಶಾಲೆಯನ್ನು ತೊರೆಯುತ್ತೇವೆ ಎಂದು ಮಕ್ಕಳು ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ನಿಮ್ಮ ಪಬ್ಲಿಕ್ ನೆಕ್ಸ್ಟ್ ಸುದ್ದಿ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
15ನೇ ಹಣಕಾಸು ಯೋಜನೆ ಅಡಿಯಲ್ಲಿ ಶೌಚಾಲಯ ನಿರ್ಮಾಣಕ್ಕೆ ಕ್ರಮ ವಹಿಸುವಂತೆ ಪಿಡಿಓಗೆ ಸೂಚನೆ ನೀಡಲಾಗಿದೆ. ಒಂದು ತಿಂಗಳ ಒಳಗಾಗಿ ಶೌಚಾಲಯವನ್ನು ನಿರ್ಮಾಣ ಮಾಡಿಕೊಡಬೇಕು. ನಾಳೆಯಿಂದಲೇ ಕಾಮಗಾರಿ ನಡೆಸಲು ಆದೇಶ ನೀಡಿದ್ದೇನೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್ ಹೇಳಿದ್ದಾರೆ. ಪಬ್ಲಿಕ್ ನೆಕ್ಸ್ಟ್ ವರದಿಯ ಬಿಗ್ ಇಂಪ್ಯಾಕ್ಟ್ ಇದಾಗಿದೆ.
ಸಿಎಂ ಸುಗಂಧರಾಜು ಪಬ್ಲಿಕ್ ನೆಕ್ಸ್ಟ್ ನಂಜನಗೂಡು.
PublicNext
12/11/2024 10:18 pm