ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ರೈತ ಕುಟುಂಬಗಳ ಪಹಣಿ ಪತ್ರಿಕೆಯ ಕಾಲಂ ನಂಬರ್ 11ರಲ್ಲಿ ನಮೂದಾಗಿದ್ದ ಸದರಿ ಆಸ್ತಿ ವಕ್ಫ್ ಆಸ್ತಿಗೆ ಒಳಪಟ್ಟಿದೆ ಎಂಬ ಶಬ್ಧ ಇದೀಗ ತೆರವಾಗಿದೆ.
ತಮ್ಮ ಪಹಣಿ ಪತ್ರಿಕೆಯಲ್ಲಿ ನಮೂದಾಗಿದ್ದ ವಕ್ಫ್ ಹೆಸರನ್ನು ಕಂಡು ರೈತರು ಕಕ್ಕಾಬಿಕ್ಕಿಯಾಗಿದ್ದರು. ಅಲ್ಲದೇ ಅಷ್ಟೇ ಆತಂಕ ಕೂಡ ಪಟ್ಟಿದ್ದರು. ಪಹಣಿಯಲ್ಲಿನ ವಕ್ಫ್ ಆಸ್ತಿ ಎಂಬ ಪದವನ್ನು ತೆಗೆಯಬೇಕು ಎಂದು ಆಗ್ರಹಿಸಿ ಉಪ್ಪಿನ ಬೆಟಗೇರಿ ಗ್ರಾಮದ ರೈತರು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ದೊಡ್ಡಮಟ್ಟದ ಹೋರಾಟ ಕೂಡ ನಡೆಸಿದ್ದರು. ಪಹಣಿಯಲ್ಲಿ ನಮೂದಾಗಿದ್ದ ವಕ್ಫ್ ಹೆಸರನ್ನು ತೆರವುಗೊಳಿಸುವಂತೆ ತಹಶೀಲ್ದಾರರಿಗೆ ಗಡುವು ನೀಡಿದ್ದರು. ಇದೀಗ ರೈತರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಉಪ್ಪಿನ ಬೆಟಗೇರಿ ಗ್ರಾಮದ ಜವಳಗಿ, ಮಸೂತಿ ಹಾಗೂ ಹುಟಗಿ ಎಂಬ ರೈತ ಕುಟುಂಬದ ಪಹಣಿಯಲ್ಲಿ ನಮೂದಾಗಿದ್ದ ವಕ್ಫ್ ಹೆಸರು ತೆರವಾಗಿದೆ. ಇದನ್ನು ತಾತ್ಕಾಲಿಕವಾಗಿ ತೆಗೆದು ಹಾಕಬಾರದು. ನಮ್ಮ ಆಸ್ತಿ ನಮಗೇ ಉಳಿಯಬೇಕು ಮತ್ತೊಮ್ಮೆ ನಮ್ಮ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಬಾರದು ಎಂದು ರೈತರು ಒತ್ತಾಯಿಸಿದ್ದಾರೆ.
ಒಟ್ಟಾರೆ ಉಪ್ಪಿನ ಬೆಟಗೇರಿ ಗ್ರಾಮದ ರೈತರ ಪಹಣಿ ಪತ್ರಿಕೆಯಲ್ಲಿ ನಮೂದಾಗಿದ್ದ ವಕ್ಫ್ ಹೆಸರು ಇದೀಗ ತೆರವಾಗಿದ್ದು, ಬಾಕಿ ಇರುವ ರೈತರ ಪರಿಸ್ಥಿತಿ ಎಲ್ಲಿಗೆ ಬಂದು ನಿಲ್ಲುತ್ತೋ ಕಾದು ನೋಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
12/11/2024 10:20 pm