ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರಿನಲ್ಲಿ ಮುಂದುವರೆದ ಬೀಟಮ್ಮ ಅಂಡ್ ಗ್ಯಾಂಗ್ ರೌಂಡ್ಸ್ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಶಾಲೆಗಳಿಗೆ ರಜೆ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಬೀಟಮ್ಮ ಅಂಡ್ ಗ್ಯಾಂಗ್ ನ ರೌಂಡ್ಸ್ ಮುಂದುವರೆದಿದೆ. ನಗರ ಪ್ರದೇಶದಿಂದ ಕೇವಲ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಆನೆಗಳ ಗುಂಪು ಬೀಡು ಬಿಟ್ಟಿರುವ ಹಿನ್ನೆಲೆಯಲ್ಲಿ 13 ಗ್ರಾಮಗಳಲ್ಲಿ ಚಿಕ್ಕಮಗಳೂರು ತಹಶೀಲ್ದಾರ್ ನಿಷೇಧಾಜ್ಞೆ ಹೊರಡಿಸಿದ್ದಾರೆ.

ಮತ್ತಾವರ, ದಂಬದಹಳ್ಳಿ, ಶಿರಗುಂದ, ದುಂಗೆರೆ, ಮೂಗತಿಹಳ್ಳಿ, ಕದ್ರಿಮಿದ್ರಿ, ಆಲದಗುಡ್ಡೆ, ವಸ್ತಾರೆ, ನಂದಿಕೆರೆ, ಹುಲುವಾಲೆ, ತೊಂಡುವಳ್ಳಿ, ಸಂಸೆ, ದಿಣ್ಣೆಕೆರೆ ಗ್ರಾಮಗಳಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ಈ ಗ್ರಾಮಗಳಲ್ಲಿರುವ ಶಾಲೆಗಳಿಗೆ ರಜೆಯನ್ನು ನೀಡಲಾಗಿದ್ದು ನಿಷೇಧಾಜ್ಞೆಯ ಸೂಚನೆಯಂತೆ ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ನಿಲ್ಲುವುದು, ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ. ಆನೆಗಳು ಓಡಾಡುತ್ತಿರುವ ಬಗ್ಗೆ ಇಟಿಎಫ್ ಸಿಬ್ಬಂದಿಗಳು ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಬೀಟಮ್ಮ & ಗ್ಯಾಂಗ್ ಸಂಚರಿಸುತ್ತಿರುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ನಿಲುಗಡೆಗೊಳಿಸಲಾಗಿದೆ. ಇತ್ತೀಚಿನ ಮಾಹಿತಿಯ ಪ್ರಕಾರ 23 ಆನೆಗಳ ಗುಂಪು ಆಲದಗುಡ್ಡೆ ಸಮೀಪದ ಮಾರಿಕಟ್ಟೆ ಗುಡ್ಡದಲ್ಲಿ ಕಂಡುಬಂದಿವೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

13/11/2024 12:05 pm

Cinque Terre

800

Cinque Terre

0

ಸಂಬಂಧಿತ ಸುದ್ದಿ