ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಲೆಮೊರಬ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಅಡಿವೆಪ್ಪ ತಡಕೋಡ (57) ಎಂಬುವವರೇ ಹತ್ಯೆಗೀಡಾದ ದುರ್ದೈವಿ.
ಕಾಳು ಶೇಖರಿಸಿಟ್ಟಿದ್ದ ಮನೆಯಲ್ಲಿ ಅಡಿವೆಪ್ಪ ಮಲಗಿಕೊಂಡಿದ್ದ ವೇಳೆ ದುಷ್ಕರ್ಮಿಗಳು ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ.
ಹತ್ಯೆ ಮಾಡಿದ ಆರೋಪಿಗಳು ಯಾರು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ನವಲಗುಂದ ಠಾಣೆ ಪೊಲೀಸರು ಹಾಗೂ ಶ್ವಾನ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/11/2024 12:31 pm