ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕಟ್ಟಡ ಪರವಾನಿಗೆ ನೀಡಲು ಸತಾಯಿಸುತ್ತಿರುವ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ವ್ಯಕ್ತಿಯ 'ಏಕಾಂಗಿ ಧರಣಿʼ

ಉಡುಪಿ: ಹಲವು ಬಾರಿ ಕಚೇರಿಗೆ ಅಲೆದಾಟ ಮಾಡಿದರೂ ಕಟ್ಟಡ ಪರವಾನಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅರ್ಜಿದಾರ, ಸಾಮಾಜಿಕ ಕಾರ್ಯಕರ್ತರೊಬ್ಬರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ ಕುಳಿತ ಘಟನೆ ನಡೆದಿದೆ.

ಕಚೇರಿಯೊಳಗೆ ಕುಳಿತು ಧರಣಿ ನಡೆಸಿದ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಹನೀಫ್, ಬಳಿಕ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಅವರ ಭರವಸೆ ಹಿನ್ನೆಲೆಯಲ್ಲಿ ಧರಣಿಯನ್ನು ಕೈಬಿಟ್ಟಿದ್ದಾರೆ. ಪ್ರಾಧಿಕಾರವೇ ನೀಡಿದ ಲೇಔಟ್‌ನ್ನು ಅಧಿಕಾರಿಗಳು ಅಕ್ರಮ ಎಂದು ಹೇಳಿ ಕಟ್ಟಡ ಪರವಾನಿಗೆ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಈ ಜಾಗಕ್ಕೆ ಭೂ ಬೆಲೆಯ ಶೇ.15ರಷ್ಟು ದಂಡ ಪಾವತಿಸಲಾಗಿದೆ. ಹಾಗಾಗಿ ಈ ಲೇಔಟ್ ಅಕ್ರಮ ಆಗಲು ಹೇಗೆ ಸಾಧ್ಯ? ಎಂದು ಮೊಹಮ್ಮದ್ ಹನೀಫ್ ಪ್ರಶ್ನಿಸಿದ್ದಾರೆ.

ಬಡವರಿಗೆ ನೀಡಿದ ಮೂರೂವರೆ ಸೆಂಟ್ಸ್ ಜಾಗಕ್ಕೆ ತೊಂದರೆ ಕೊಡುತ್ತಿದ್ದಾರೆ. ಇವರು ಮಾಡಿದ ತಪ್ಪಿಗೆ ನಾವು ಶಿಕ್ಷೆ ಅನುಭವಿಸುವಂತಾಗಿದೆ. ಇಂತಹ ಪ್ರಾಧಿಕಾರ ನಮಗೆ ಬೇಡ. ಪರವಾನಿಗೆ ಸಿಗುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ಅವರು ಪಟ್ಟು ಹಿಡಿದರು. ಪ್ರಾಧಿಕಾರದ ಅಧ್ಯಕ್ಷರು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹನೀಫ್ ಧರಣಿ ಕೈಬಿಟ್ಟಿದ್ದಾರೆ.

Edited By : Suman K
Kshetra Samachara

Kshetra Samachara

13/11/2024 12:44 pm

Cinque Terre

3.83 K

Cinque Terre

0

ಸಂಬಂಧಿತ ಸುದ್ದಿ