ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್: ಒಗ್ಗರಣೆ ಅನ್ನ ಸೇವಿಸಿ 50ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬೀದರ್: ಒಗ್ಗರಣೆ ಅನ್ನ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಬೀದರ್ ಜಿಲ್ಲೆ ಹುಮನಾಬಾದ್‌ನಲ್ಲಿ ನಡೆದಿದೆ.

ಬಸವತೀರ್ಥ ವಿದ್ಯಾಪೀಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಒಗ್ಗರಣೆ ಅನ್ನ ತಿಂದು 50ಕ್ಕೂ ಅಧಿಕ ಮಕ್ಕಳಿಗೆ ವಾಂತಿ ಬೇಧಿ ಕಾಣಿಸಿಕೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನಿನ್ನೆ ರಾತ್ರಿ ಉಳಿದ ಅನ್ನಕ್ಕೆ ಇಂದು ಒಗ್ಗರಣೆ ನೀಡಿ ಕೊಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಹುಮನಾಬಾದ್ ಪಟ್ಟಣದ ಹೊರವಲಯದ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆ ಎಂಎಲ್‌ಸಿ ಭೀಮಾರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವರದಿ: ಯೋಹಾನ್ ಪಿ ಹೊನ್ನಡ್ಡಿ ಬೀದರ್

Edited By : Ashok M
PublicNext

PublicNext

13/11/2024 01:08 pm

Cinque Terre

19.82 K

Cinque Terre

0