ನವಲಗುಂದ: ಬಿಜೆಪಿ ತತ್ವ-ಸಿದ್ಧಾಂತದಿಂದ ಪ್ರಪಂಚದಲ್ಲಿ ಹೆಚ್ಚು ಸದಸ್ಯರನ್ನು ಹೊಂದಿದ ಪಕ್ಷ ಎಂಬ ಹೆಗ್ಗಳಿಕೆ ಇದೆ. ಆದ್ದರಿಂದ ಕಾರ್ಯಕರ್ತರು ಪ್ರಾಮಾಣಿಕವಾಗಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಂಡಲ್ಲಿ ಅವಕಾಶ, ಸ್ಥಾನಮಾನಗಳು ಹುಡುಕಿಕೊಂಡು ಬರುತ್ತವೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ಪಟ್ಟಣದ ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ಜಿಲ್ಲಾ ಚುಣಾವಣಾ ಸಂಘಟನಾ ಪರ್ವ ಹಾಗೂ ಪಕ್ಷದ ಸಂಘಟನೆ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ರಾಜ್ಯ ಸರ್ಕಾರದಿಂದ ಆರ್ಥಕ ಸ್ಥಿತಿ ದಿವಾಳಿ ಅಂಚಿನಲ್ಲಿದೆ. ಜನ ಸಾಮಾನ್ಯರು ಬಿಜೆಪಿ ಪರ ಒಲವು ವ್ಯಕ್ತಪಡಿಸುತ್ತಿದ್ದಾರೆ.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಜನರಿಗೆ ಕಂಟಕವಾಗಿವೆ. ಸರ್ಕಾರದ ಕಾರ್ಯಚಟುವಟಿಕೆಗಳನ್ನು ನೋಡಿ ಜನಸಾಮಾನ್ಯರು ರೋಸಿ ಹೋಗಿದ್ದಾರೆ. ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗಿದ್ದು ಹಲವಾರು ವಿದ್ಯಾರ್ಥಿಗಳು ಪ್ರಾಣತ್ಯಾಗ ಮಾಡಿದ್ದಾರೆ. ಅವರ ಶಾಪ ಈ ಸರ್ಕಾರಕ್ಕೆ ತಟ್ಟಲಿದೆ ಎಂದರು.
ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ನಿಂಗಪ್ಪ ಸುತಗಟ್ಟಿ, ಮಂಡಳ ಅಧ್ಯಕ್ಷ ಗಂಗಣ್ಣ ಮನಮಿ, ಸಿದ್ದನಗೌಡ ಪಾಟೀಲ, ಎಸ್.ಬಿ. ದಾನಪ್ಪಗೌಡರ, ಈರಣ್ಣ ಚವಡಿ, ನಾಗಪ್ಪ ಹರ್ತಿ, ಬಸವರಾಜ ಕಾತರಕಿ, ಷಣ್ಮುಖ ಗುರಿಕಾರ ಸೇರಿದಂತೆ ಹಲವರಿದ್ದರು.
Kshetra Samachara
13/11/2024 03:00 pm