ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಮಕ್ಕಳ ದಿನಾಚರಣೆ ಪ್ರಯುಕ್ತ ವಿವಿಧ ಸೃಜನಾತ್ಮಕ ಕಲೆಗಳ ಪ್ರದರ್ಶನ ಸ್ಪರ್ಧೆಗೆ ಹೆಸರು ನೊಂದಣಿ ಅವಕಾಶ

ಚಿಕ್ಕಮಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಬಾಲಭವನ ಸೊಸೈಟಿ, ಬೆಂಗಳೂರು ಇವರ ವತಿಯಿಂದ ನವೆಂಬರ್ 16 ರಂದು ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಬಾಲಭವನ ಆವರಣದಲ್ಲಿ 9 ರಿಂದ 16 ವರ್ಷದ ಮಕ್ಕಳಿಗೆ ಜಿಲ್ಲಾ ಮಟ್ಟದ ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಸ್ಪರ್ಧೆ, ವಾದ್ಯ ಸಂಗೀತ, ತಬಲಾ, ಮೃದಂಗ, ಕೀಬೋರ್ಡ್, ಕೊಳಲು, ಡೊಳ್ಳು, ನಗಾರಿ ಹಾಗೂ ವಿಜ್ಞಾನದಲ್ಲಿ ಸೃಜನಾತ್ಮಕ ಆವಿಷ್ಕಾರ, ಚಿತ್ರಕಲಾ ಸ್ಪರ್ಧೆ ಮತ್ತು ಅಂಗವಿಕಲ/ಬುಡಕಟ್ಟು ಪ್ರದೇಶದ ಮಕ್ಕಳಿಗಾಗಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಆಸಕ್ತ ಮಕ್ಕಳು ಸ್ಪರ್ಧೆಗಾಗಿ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.

ನವೆಂಬರ್ 14 ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಛೇರಿಯನ್ನು (ಮೊ.ಸಂ. 9393187534) ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

13/11/2024 03:11 pm

Cinque Terre

580

Cinque Terre

0

ಸಂಬಂಧಿತ ಸುದ್ದಿ