ವಾಷಿಂಗ್ಟನ್: ಟೆಸ್ಲಾ ಮಾಲೀಕ ಎಲಾನ್ ಮಸ್ಕ್ ಮತ್ತು ಅನಿವಾಸಿ ಭಾರತೀಯ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು ಅಮೆರಿಕ ಸರ್ಕಾರದ ಕಾರ್ಯಕ್ಷಮತೆ ಮೇಲುಸ್ತುವಾರಿ ಇಲಾಖೆಯನ್ನು ಮುನ್ನಡೆಸಲಿದ್ದಾರೆ ಎಂದು ಅಮೆರಿಕ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಘೋಷಿಸಿದ್ದಾರೆ.
‘ಈ ಅದ್ಭುತ ಅಮೆರಿಕನ್ನರು ನನ್ನ ಆಡಳಿತದಲ್ಲಿ ‘ಸೇವ್ ಅಮೆರಿಕ’ ಚಳವಳಿಗೆ ಅಗತ್ಯವಿರುವ ಅಧಿಕಾರಶಾಹಿ ಪ್ರವೃತ್ತಿಯನ್ನು ತೆಗೆದುಹಾಕಲು, ಅನಗತ್ಯ ನಿಯಮಗಳನ್ನು ಕಿತ್ತೊಗೆಯಲು, ವ್ಯರ್ಥ ವೆಚ್ಚಗಳನ್ನು ಕಡಿತಗೊಳಿಸಲು ಹಾಗೂ ಫೆಡರಲ್ ಏಜೆನ್ಸಿಗಳನ್ನು ಪುನರ್ ರಚಿಸಲು ನೆರವಾಗುತ್ತಾರೆ’ ಎಂದು ಟ್ರಂಪ್ ಹೇಳಿದ್ದಾರೆ.
ಎಲಾನ್ ಮತ್ತು ವಿವೇಕ್ ಈ ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದನ್ನು ನೋಡಲು ಎದುರು ನೋಡುತ್ತಿದ್ದೇನೆ’ ಎಂದು ಟ್ರಂಪ್ ಹೇಳಿದ್ದಾರೆ. ‘ನಮ್ಮ ಆರ್ಥಿಕತೆಯ ಹೊರೆಯನ್ನು ಕಡಿಮೆ ಮಾಡಿ, ‘ಅಮೆರಿಕ ಜನರಿಗಾಗಿ ನಾವು’ ಎನ್ನುವುದನ್ನು ಸಾಬೀತು ಮಾಡುತ್ತಾರೆ ಎನ್ನುವ ನಂಬಿಕೆಯಿದೆ.
PublicNext
13/11/2024 03:23 pm