ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಂಜನಗೂಡು: ಕೃಷಿ ಜಮೀನಿನಲ್ಲಿ ನೆರೆಹೊರೆಯವರ ಕಿರಿಕ್‌ಗೆ ಬೆದರಿದ ರೈತ ಕುಟುಂಬ..!

ನಂಜನಗೂಡು: ಕೃಷಿ ಮಾಡಿ ಬದುಕುವ ಶ್ರಮಜೀವಿಗಳ ಕುಟುಂಬಕ್ಕೆ ನೆರೆಹೊರೆಯವರ ಕಿರಿಕ್ ನಿಂದ ಸಂಕಷ್ಟ ಎದುರಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಹೋಬಳಿಯ ಕಾಟೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಸಾಕಷ್ಟು ವರ್ಷಗಳಿಂದಲೂ ಕೂಡ ಜಮೀನಿಗೆ ತೆರಳುವ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದು, ಒತ್ತುವರಿ ತೆರವುಗೊಳಿಸುವಂತೆ ಕಳೆದ ಎರಡು ವರ್ಷಗಳಿಂದ ಅರ್ಜಿ ನೀಡಿ ತಾಲ್ಲೂಕು ಕಚೇರಿಗೆ ಅಲೆದಾಡಿದರೂ ಯಾವೊಬ್ಬ ಅಧಿಕಾರಿಯೂ ಕೂಡ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಕಾಟೂರು ಮತ್ತು ಅಲ್ಲಯ್ಯನಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಸರ್ವೆ ನಂಬರ್ 264/3 ಮೂರರಲ್ಲಿ ಬರುವ ಚಂದ್ರಮ್ಮ ಎಂಬ ರೈತ ಮಹಿಳೆಯ ಜಮೀನಿಗೆ ತೆರಳಲು ರಸ್ತೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ.

ನಕ್ಷೆಯಲ್ಲಿ ತಿರುಗಾಡುವ ರಸ್ತೆಯಲ್ಲಿ ಒತ್ತುವರಿ ತೆರವು ಗೊಳಿಸುವಂತೆ 31-10-2022 ರಲ್ಲಿ ತಹಶೀಲ್ದಾರ್ ರವರಿಗೆ ಅರ್ಜಿ ಸಲ್ಲಿಸಲಾಗಿದೆ. ಸಂಬಂಧಪಟ್ಟ ಕಂದಾಯ ಅಧಿಕಾರಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಶಾಸಕ ದರ್ಶನ್ ಧ್ರುವನಾರಾಯಣ್ ರವರ ಗಮನಕ್ಕೆ ತರಲಾಗಿದೆ. ಹತ್ತಿರದ ಪೊಲೀಸ್ ಠಾಣೆಗೂ ಕೂಡ ವಿಚಾರ ಮುಟ್ಟಿಸಲಾಗಿದೆ. ಕೂಡಲೇ ಒತ್ತುವರಿ ತೆರವುಗೊಳಿಸುವಂತೆ ಶಾಸಕರು ಸೂಚಿಸಿದ್ದಾರೆ. ಆದರೆ, ಶಾಸಕರ ಮಾತಿಗೂ ಇಲ್ಲಿ ಕಿಮ್ಮತ್ತಿಲ್ಲ. ಕಾನೂನು ಬದ್ಧವಾಗಿ ತಾಲ್ಲೂಕು ಆಡಳಿತ ಅಧಿಕಾರಿಗಳು ನೊಂದ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವಲ್ಲಿ ತಾರತಮ್ಯ ಮಾಡುತ್ತಿದ್ದಾರೆ.

ಮೂರ್ನಾಲ್ಕು ವರ್ಷಗಳಿಂದ ನಿರಂತರವಾಗಿ ಸಮಸ್ಯೆ ಬಗೆಹರಿಸದ ಅಧಿಕಾರಿಗಳ ವಿರುದ್ಧ ಈಗ ಇಡೀ ನೊಂದ ಕುಟುಂಬ ತಾಲ್ಲೂಕು ಆಡಳಿತದ ಭವನದ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಮಾಡಲು ತೀರ್ಮಾನ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಸಾಧ್ಯವಾಗದಿದ್ದರೆ ನಮಗೆ ರಾಜ್ಯಪಾಲರ ಮೂಲಕ ದಯಾ ಮರಣವನ್ನು ಕಲ್ಪಿಸಿ ಕೊಡಿ ಇಲ್ಲ ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ತಾಲ್ಲೂಕು ಆಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸುಗಂಧರಾಜು, ಪಬ್ಲಿಕ್ ನೆಕ್ಸ್ಟ್, ನಂಜನಗೂಡು

Edited By : Ashok M
PublicNext

PublicNext

13/11/2024 03:27 pm

Cinque Terre

20.39 K

Cinque Terre

0

ಸಂಬಂಧಿತ ಸುದ್ದಿ