ವಿಜಯಪುರ: ವಿಜಯಪುರ ಜಿಲ್ಲೆ ತಾಳಿಕೋಟಿ ಪಟ್ಟಣದಲ್ಲಿ ಪಾದಚಾರಿ ರಸ್ತೆಯ ಅತಿಕ್ರಮಣವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು.
ಪುರಸಭೆ ಮುಖ್ಯಾಧಿಕಾರಿ ಮೋಹನ ಜಾಧವ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ಆರಂಭಿಸಿದ ಪುರಸಭೆ ಅಧಿಕಾರಿಗಳು ಪಟ್ಟಣದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಮೈಲೇಶ್ವರ ಮಾರ್ಗ ಸೇರಿದಂತೆ ವಿವಿಧ ಕಡೆಗಳಲ್ಲಿ ತೆರವು ಕಾರ್ಯಾಚರಣೆ ನಡೆಸಿದರು.
ಇನ್ನೂ ಕಾರ್ಯಾಚರಣೆಯ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹಾಗೂ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ನೇತೃತ್ವದಲ್ಲಿ ಪೊಲೀಸ ಇಲಾಖೆಯಿಂದ ಬಂದೋಬಸ್ತ್ ಮಾಡಲಾಗಿತ್ತು.
PublicNext
13/11/2024 03:36 pm