ವಿಜಯಪುರ: ಆಕಸ್ಮಿಕ ಬೆಂಕಿಯಿಂದಾಗಿ ಮನೆಯೊಂದು ಹೊತ್ತಿ ಉರಿದಿರುವ ಘಟನೆ ವಿಜಯಪುರ ನಗರದಲ್ಲಿ ಸಂಭವಿಸಿದೆ.
ವಿಜಯಪುರ ನಗರದ ವಾರ್ಡ್ ನಂಬರ್ 28 ನೌಬಾಗ್ ನಲ್ಲಿ ಸದಾನಂದ ಚಲವಾದಿ ಎಂಬವರಿಗೆ ಸೇರಿದ ಮನೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಅವಘಡಕ್ಕೆ ಮನೆಯಲ್ಲಿರುವ ಫ್ರಿಡ್ಜ್ ಬ್ಲಾಸ್ಟ್ ಆಗಿರಬಹುದು ಎಂದು ಶಂಕಿಸಲಾಗಿದೆ.
ಅದೃಷ್ಟವಶಾತ್ ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಂಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಗಾಂಧಿ ಚೌಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
-ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ್ ವಿಜಯಪುರ
PublicNext
13/11/2024 03:51 pm