ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ರೋಗಿ ಸಾವು, ಸಂಬಂಧಿಕರ ಪ್ರತಿಭಟನೆ

ಮೂಡಿಗೆರೆ: ಚಿಕಿತ್ಸೆಗೆಂದು ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ಬಂದಿದ್ದ ರೋಗಿಯೊಬ್ಬರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರೋಗಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆಯ ಮುಂದೆ ರೋಗಿಯ ಸಂಬಂಧಿಕರು, ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ಗುತ್ತಿ ಗ್ರಾಮದ ಸುಂದರೇಶ್ (31 ವರ್ಷ) ಎಂಬುವವರು ಹೊಟ್ಟೆ ನೋವು, ಎದೆ ಭಾಗದಲ್ಲಿ ಉರಿ ಕಾಣಿಸಿಕೊಂಡು ಅಸ್ವಸ್ಥರಾದ ಹಿನ್ನಲೆಯಲ್ಲಿ ಅವರನ್ನು ತಾಲೂಕು ಆಸ್ಪತ್ರೆಗೆ ಕರೆ ತರಲಾಯಿತು.

ಆದರೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರು ಇರಲಿಲ್ಲ. ನರ್ಸ್ ಒಬ್ಬರು ಮಾತ್ರೆ ನೀಡಿ ಮಲಗಿಸಿ ಹೋದವರು ಮತ್ತೆ ವೈದ್ಯರಾಗಲಿ ಅಥವಾ ಸಿಬ್ಬಂದಿ ಯಾರೊಬ್ಬರೂ ತಿರುಗಿಯೂ ನೋಡಿಲ್ಲ, ಹೀಗಾಗಿ ಸುಂದರೇಶ್ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಂದರೇಶ್ ಸಾವಿನ ವಿಷಯ ತಿಳಿದು ಆಸ್ಪತ್ರೆ ಬಳಿ ಜಮಾಯಿಸಿದ ಗುತ್ತಿ ಗ್ರಾಮಸ್ಥರು ಮತ್ತು ಸಂಬಂಧಿಕರು ಪ್ರತಿಭಟನೆ ನಡೆಸಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಮೃತ ದೇಹವನ್ನು ತೆಗೆದುಕೊಂಡು ಹೋಗುವುದಿಲ್ಲವೆಂದು ಪಟ್ಟು ಹಿಡಿದಾಗ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿತ್ತು.

ಪೊಲೀಸರು ಹೆಚ್ಚುವರಿ ಸಿಬ್ಬಂದಿ ಕರೆಸಿಕೊಂಡು ಆಸ್ಪತ್ರೆ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಿದರು. ಸಿಸಿಟಿವಿ ಪರಿಶೀಲಿಸಿ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ವರದಿ ನೀಡಲಾಗುವುದು ಎಂದು ತಹಶೀಲ್ದಾರ್ ರಾಜಶೇಖರ್ ಮೂರ್ತಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈ ಬಿಡಲಾಯಿತು.

Edited By : Suman K
Kshetra Samachara

Kshetra Samachara

13/11/2024 04:36 pm

Cinque Terre

820

Cinque Terre

0

ಸಂಬಂಧಿತ ಸುದ್ದಿ