ಧಾರವಾಡ: ಅಂತ್ಯ ಸಂಸ್ಕಾರ ಮುಗಿಸಿ ಬೈಕ್ ಮೇಲೆ ಮರಳಿ ಮನೆಗೆ ಹೊರಟಿದ್ದ ಬೈಕ್ ಸವಾರನಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.
ಗದಗ ಜಿಲ್ಲೆಯ ಅಡವಿಸೋಮಾಪುರ ಗ್ರಾಮದ ಗೂಳಪ್ಪ ಉಮ್ಮಣ್ಣವರ (40) ಎಂಬುವವರೇ ಈ ಘಟನೆಯಲ್ಲಿ ಸಾವನ್ನಪ್ಪಿದವರು. ಗೂಳಪ್ಪ ತನ್ನ ಪತ್ನಿ ಭೀಮವ್ವ ಹಾಗೂ ತಾಯಿ ಪಾರವ್ವ ಅವರನ್ನು ಬೈಕ್ ಮೇಲೆ ಕರೆದುಕೊಂಡು ಹುಬ್ಬಳ್ಳಿ ತಾಲೂಕಿನ ರೊಟ್ಟಿಗವಾಡ ಗ್ರಾಮಕ್ಕೆ ಅಂತ್ಯ ಸಂಸ್ಕಾರಕ್ಕೆಂದು ಬಂದಿದ್ದರು.
ಅಂತ್ಯಸಂಸ್ಕಾರ ಮುಗಿಸಿ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಇದರಿಂದ ಗೂಳಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಕೂಡಲೇ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ಗೆ ಡಿಕ್ಕಿ ಹೊಡೆದ ಕ್ಯಾಂಟರ್ ಚಾಲಕನನ್ನು ಸ್ಥಳೀಯರು ಹಿಡಿದು ಥಳಿಸಿದ್ದಾರೆ. ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
13/11/2024 05:20 pm