ಕುಂದಗೋಳ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕಾಮಗಾರಿ ಮತ್ತು ಓ.ಎಚ್.ಟಿ ಓವರ್ ಹೆಡ್ ಟ್ಯಾಂಕ್ ಸ್ವಚ್ಛತೆಯನ್ನು ಜಿಲ್ಲಾ ಪಂಚಾಯತ್ ಸಿಇಒ ಸ್ವರೂಪ ಟಿಕೆ ಅವರು ಪರಿಶೀಲನೆ ನಡೆಸಿದರು.
ಕುಂದಗೋಳ ಮಳಲಿ ಮತ್ತು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಂತಹ ಕಾಮಗಾರಿಗಳನ್ನು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ನೇತೃತ್ವದಲ್ಲಿ ಪರಿಶೀಲಿಸಿದ ಅವರು ಕಾಮಗಾರಿ ಗುಣಮಟ್ಟತೆ ಕಾಯ್ದುಕೊಳ್ಳಲು ಸೂಚಿಸಿದರು.
ಬಳಿಕ ಮತ್ತಿಗಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಸಿಇಒ ವಿದ್ಯಾರ್ಥಿಗಳ ಜೊತೆ ಬೆರೆತು ಅವರ ಶಿಕ್ಷಣ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಿದರು.
ಮಳಲಿ ಸರ್ಕಾರಿ ಶಾಲೆ ಆವರಣದಲ್ಲಿ ನಿರ್ಮಿಸಿರುವ ಕಟ್ಟಡ ಕಾಮಗಾರಿಗಳನ್ನು ವೀಕ್ಷಿಸಿದರು, ಈ ಸಂದರ್ಭದಲ್ಲಿ ನರೇಗಾ ಸಹಾಯಕ ನಿರ್ದೇಶಕ ಅಜಯ್.ಎನ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಮತ್ತು ಸದಸ್ಯರು ಸೇರಿದಂತೆ ತಾಲೂಕು ಮಟ್ಟದ ಸಿಬ್ಬಂದಿ ಉಪಸ್ಥಿತರಿದ್ದರು.
Kshetra Samachara
13/11/2024 05:41 pm