ಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ವರ್ಣದ ಬಗ್ಗೆ ಜಮೀರ್ ಹೇಳಿಕೆ ನೀಡಿದ್ದು, ಜಮೀರ್ ವಿರುದ್ಧ ಜೆಡಿಎಸ್ ಮುಖಂಡ ರಮೇಶ್ ಗೌಡ ಕಿಡಿ ಕಾರಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಪ್ರತಿಭಟನೆ ನಡೆಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ರಮೇಶ್ ಗೌಡ, ಜಮೀರ್ ಅಹ್ಮದ್ ಖಾನ್ ಹೇಳಿಕೆ ಶೋಭೆ ತರಲ್ಲ. ಈ ರೀತಿ ಹೇಳಿಕೆ ನೀಡಿದ್ದು ಇದೆ ಮೊದಲಲ್ಲ. ಕುಮಾರಣ್ಣ, ದೇವೇಗೌಡರ ಕುಟುಂಬದ ಖರೀದಿ ವಿಚಾರಕ್ಕೆ ಬಂದರೆ, ಜಮೀರ್ ಇನ್ನೊಂದು ಜನ್ಮ ಎತ್ತಿ ಬರಬೇಕು ಎಂದು ಹೇಳಿದರು.
ಜಮೀರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿ ರಾಜ್ಯ ಸರ್ಕಾರ ಕೂಡಲೇ ಜಮೀರ್ ಅವರನ್ನ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
PublicNext
13/11/2024 07:04 pm