ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಾ ಹಗರಣ : ಇ.ಡಿ.ವಿಚಾರಣೆ ಮುಗಿಸಿ ಹೊರ ಬಂದ ಸಂಸದ ಕುಮಾರ್ ನಾಯ್ಕ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ಮುಂದೆ ಮಾಜಿ ಐಎಎಸ್ ಅಧಿಕಾರಿ ಹಾಗೂ ಹಾಲಿ ಸಂಸದ ಜಿ.ಕುಮಾರ್ ನಾಯ್ಕ್ ಇಂದು ಹಾಜರಾಗಿ ವಿಚಾರಣೆಗೆ ವಿಚಾರಣೆ ಎದುರಿಸಿದರು.

ಶಾಂತಿನಗರದಲ್ಲಿರುವ ಜಾರಿ ನಿರ್ದೇಶಾನಾಲಯ ಕಚೇರಿಗೆ ವಿಚಾರಣೆ ಹಾಜರಾದ ಕುಮಾರ್ ನಾಯ್ಕ್ ನನ್ನ ಇಂದು ಆರೂವರೆ ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದರು. 2002ರಿಂದ 2005ರವರೆಗೆ ಮೈಸೂರು ಜಿಲ್ಲಾಧಿಕಾರಿಯಾಗಿ ನಾಯ್ಕ್ ಅವರು ಕರ್ತವ್ಯ ನಿರ್ವಹಿಸಿದ್ದರು. ಈ ವೇಳೆ ಕೃಷಿ ಭೂಮಿಯನ್ನ ಕೃಷಿಯೇತರ ಭೂಮಿಯಾಗಿ ಪರಿವರ್ತಿಸಿದ್ದರು. ಈ ಸಂಬಂಧ ವಿಚಾರಣೆ ಹಾಜರಾಗುವಂತೆ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದರು.

ವಿಚಾರಣೆ ಬಳಿಕ ಹೊರಬಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರ್ ನಾಯ್ಕ್, ವಿಚಾರಣೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಗೌರವದಿಂದ ವಿಚಾರಣೆಗೆ ಹಾಜರಾಗಿದ್ದೇನೆ. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸರಿಯಾಗಿ ಉತ್ತರಿಸಿದ್ದೇನೆ. ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಕೃಷಿ ಭೂಮಿಯನ್ನ ಯಾವ ರೀತಿ ಕೃಷಿಯೇತರ ಭೂಮಿಯಾಗಿ ಪರಿವರ್ತಿಸಿದ್ದೇನೆ ಎಂಬುದರ ಬಗ್ಗೆ ಮಾಹಿತಿ ನೀಡಿದ್ದೇನೆ.

ಭೂ ದಾಖಲೆ ಪರಿವರ್ತನೆ ಬಗ್ಗೆ ಹಳೆದ ದಾಖಲಾತಿಗಳ ಬಗ್ಗೆ ಮಾಹಿತಿ ನೀಡಿದ್ದೇನೆ. ನನ್ನ ಮೇಲೆ ಯಾವುದೇ ಒತ್ತಡವಿಲ್ಲ. ವಿಚಾರಣೆ ಕರೆದರೆ ಮತ್ತೆ ಹಾಜರಾಗುವೆ ಎಂದರು.

Edited By : Manjunath H D
PublicNext

PublicNext

13/11/2024 07:44 pm

Cinque Terre

14.03 K

Cinque Terre

0

ಸಂಬಂಧಿತ ಸುದ್ದಿ