ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಸಚಿವ ಜಮೀರ್ ವಿರುದ್ಧ ಅವಹೇಳನಕಾರಿ ಮಾತು - ಪುನೀತ್ ಕೆರೆಹಳ್ಳಿ ವಿರುದ್ಧ FIR ದಾಖಲು

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನ ಕಾರಿ ಮಾತು ಹಾಗೂ ಧರ್ಮ ಮತ್ತು ಜಾತಿ ನಿಂದನೆ ಮಾಡಿದ್ದ ಆರೋಪದ ಮೇರೆಗೆ ಪುನೀತ್ ಕೆರೆ ಹಳ್ಳಿ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಚಿವ ಜಮೀರ್ ಅಹಮದ್ ಖಾನ್ ಅವರ ಆಪ್ತ ಸಹಾಯಕ ಬಿ. ಎಸ್. ಅಶೋಕ್ ನೀಡಿದ ದೂರು ಆಧರಿಸಿ ಬುಧವಾರ ಎಫ್ ಐ ಆರ್ ದಾಖಲಾಗಿದೆ.

ನವೆಂಬರ್ 11 ರಂದು ಪುನೀತ್ ಕೆರೆ ಹಳ್ಳಿ ತಮ್ಮ ಸಾಮಾಜಿಕ ಜಾಲತಾಣದ ಫೇಸ್‌ಬುಕ್ ಲಿಂಕ್‌ನಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕುರಿತು ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ನಿಂದನೆ ಮಾಡಿರುತ್ತಾರೆ. ಧರ್ಮ -ಧರ್ಮಗಳ ನಡುವೆ ದ್ವೇಷ ಬಿತ್ತುವ ಪ್ರಚೋದನಕಾರಿ ಹೇಳಿಕೆ ನೀಡಿರುತ್ತಾರೆ. ಪದೇ ಪದೇ ಅವಾಚ್ಯ ಶಬ್ದಗಳಿಂದ ಸಚಿವರನ್ನು ನಿಂದಿಸಿರುತ್ತಾರೆ.

ಜತೆಗೆ ಪ್ರಾಣ ಬೆದರಿಕೆ ಸಹ ಹಾಕಿರುತ್ತಾರೆ. ಹೀಗಾಗಿ ಕೂಡಲೇ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಮೀರ್ ಆಪ್ತ ಸಹಾಯಕ ಅಶೋಕ್ ದೂರಿನ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ FIR ದಾಖಲಾಗಿದೆ.

Edited By : Abhishek Kamoji
PublicNext

PublicNext

13/11/2024 07:44 pm

Cinque Terre

22.65 K

Cinque Terre

5

ಸಂಬಂಧಿತ ಸುದ್ದಿ