ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕಂದಾಯ ಇಲಾಖೆ, ನಗರಾಭೀವೃದ್ಧಿ ಇಲಾಖೆ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನ ಇಲಾಖೆಗಳ ನಡುವೆ ಸಮನ್ವಯದಿಂದ ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸ ಸುಗಮವಾಗಿ ವಿತರಿಸಲು ಅನುಕೂಲವಾಗುವಂತೆ ವರದಿ ನೀಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರೂ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ಜಂಟಿ ಕಾರ್ಯಪಡೆಯೊಂದನ್ನು ರಚಿಸಲು ರಾಜ್ಯ ಸರ್ಕಾರ ತೀರ್ಮಾನ.
ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಪೌರಾಳಿಡಳಿತ ಸಚಿವ ರಹೀಂ ಖಾನ್ ನೇತೃತ್ವದಲ್ಲಿ ಖಾತಾ ರಹಿತ ಆಸ್ತಿಗಳ ನೋಂದಣಿ ನಿಲ್ಲಿಸಲಾಗಿರುವುದರಿಂದ ಉದ್ಭವಿಸಿರುವ ಸಮಸ್ಯೆಗಳ ಕುರಿತು ವಿಕಾಸಸೌಧಲ್ಲಿ ಅಧಿಕಾರಿಗಳೊಂದಿಗೆ ಸಭೆ ನೆಡೆಯಿತು. ಸಭೆಯಲ್ಲಿ ಖಾತಾ ವಿತರಣೆಯಲ್ಲಿ ಉದ್ಭವಿಸಿರುವ ಗೊಂದಲಗಳ ಬಗ್ಗೆ ಚರ್ಚೆ ನಡೆಸಲಾಯ್ತು, ಬಳಿಕ ಜಂಟಿ ಕಾರ್ಯಪಡೆ ಅಧ್ಯಕ್ಷತೆವಹಿಸಿರುವ ಅಭಿವೃದ್ಧಿ ಆಯುಕ್ತರಾದ ಉಮಾ ಮಹದೇವನ್ ಅವರು ಖಾತಾ ವಿತರಿಸುವ ಸಂಬಂಧ ತಕ್ಷಣದ ಪರಿಹಾರೋಪಾಯಗಳನ್ನು ಸೂಚಿಸುವುದು ಸೇರಿದಂತೆ ಎರಡು ತಿಂಗಳ ಒಳಗೆ ಅಂತಿಮ ವರದಿಯನ್ನು ಸಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ತಿಳಿಸಲಾಯಿತು.
ಮಲೆನಾಡು ಪ್ರದೇಶದಲ್ಲಿ ವಿಶೇಷವಾಗಿ ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖಾತಾ ವಿತರಿಸುವಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿಹಾರ, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮಠಾಣ ವ್ಯಾಪ್ತಿಯ ವಿಸ್ತರಣೆ ಮುಂತಾದ ಸಮಸ್ಯೆಗಳಿಗೂ ಪರಿಹಾರೋಪಾಯಗಳನ್ನು ಶಿಫಾರಸು ಮಾಡುವಂತೆ ಕಾರ್ಯಪಡೆ ಅಧ್ಯಕ್ಷರಿಗೆ ಸೂಚಿಸಲಾಗಿದೆ. ಖಾತಾ ವಿತರಿಸುವಲ್ಲಿ ಭವಿಷ್ಯದಲ್ಲಿ ಎದರಾಗುವ ಸಮಸ್ಯೆಗಳೂ ಸೇರಿದಂತೆ ಈಗ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸೂಚಿಸುವಂತೆ ನಿರ್ದೇಶನ ನೀಡಿದರು.
PublicNext
13/11/2024 07:46 pm